ರಾಯಚೂರು ವಿದ್ಯಾರ್ಥಿನಿ ಸಾವು ಪ್ರಕರಣ  ಕಠಿಣ ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ

ಬಳ್ಳಾರಿ.ಏ,25: ರಾಯಚೂರಿನ ನವೊದಯ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿನಿ ಮಧುಪತ್ತಾರ್ ಅವರ ಸಾವಿನ ಪ್ರಕರಣದ ಬಗ್ಗೆ ರಾಜ್ಯ ಸಕಾ೯ರವು ತನಿಖೆ ನಡೆಸಬೇಕು, ವಿದ್ಯಾರ್ಥಿನಿ ಸಾವಿಗೆ ಕಾರಣರಾದವರನ್ನು ಬಂಧಿಸಬೇಕು , ಕಠಿಣ ಶಿಕ್ಷೆಗೆ ಒಳಪಡಿಸುವಂತೆ ಆಗ್ರಹಿಸಿ ಬಳ್ಳಾರಿ ಶ್ರೀವಿಶ್ವಕರ್ಮ ವಿಕಾಸ ವೇದಿಕೆ,ಎಬಿವಿಪಿ,ಅಲ್ ಇಂಡಿಯ ಡೆಮೊಕ್ರೆಟಿಕ್ ಸ್ಟುಡೆಂಟ್ ಅಸೋಷಿಯಷನ್ ಸಂಘಟನೆಗಳು ಪ್ರತಿಭಟನೆ ನಡೆಸಿದವು.

ನಗರದ ಕಾಳಮ್ಮ ಬೀದಿಯ ಶ್ರೀ ಕಾಳಿಕಾ ಕಮಠೇಶ್ವರ ದೇವಸ್ಥಾನದಿಂದ ಹೊರಟ ಪ್ರತಿಭಟನಾ ಮೆರವಣಿಗೆ ಮೋತಿಸಕ೯ಲ್, ಗಡಿಗಿ ಚೆನ್ನಪ್ಪ ವೃತ್ತದ ಮೂಲಕ ಜಿಲ್ಲಾಧಿಕಾರಿಗಳ ಕಛೇರಿಗೆ ತೆರಳಿ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯ ಸಕ೯ರಕ್ಕೆ ಮನವಿ ಪತ್ರ ನೀಡಲಾಯಿತು. ಪ್ರತಿಭಟನಾ ಮೆರವಣಿಗೆಯಲ್ಲಿ ಜಸ್ಟೀಸ್ ಫಾರ್ ಮಧು, ಬೇಕೇ ಬೇಕು ನ್ಯಾಯ ಬೇಕು ಎನ್ನುವ ಘೋಷಣೆಗಳನ್ನು ಕೂಗಲಾಯಿತು.

ಪ್ರತಿಭಟನೆಯಲ್ಲಿ ವಿವಿಧ ಸಂಘ ಸಂಸ್ಥೆಗಳ ಸದ್ಯಸರು, ಶಾಲಾ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿದ್ದರು.

Leave a Comment