ರಾಷ್ಟ್ರೀಯ ನೇತ್ರದಾನ ಪಾಕ್ಷಿಕದ ಅಂಗವಾಗಿ ಜಾಥಾ

ದಾವಣಗೆರೆ ಸೆ.9; ನೇತ್ರದಾನದ ಬಗ್ಗೆ ಅರಿವು ಮೂಡಿಸಲು ಹಾಗೂ ನೇತ್ರದಾನಕ್ಕೆ ಪ್ರೇರೇಪಿಸುವ ಸಲುವಾಗಿ ಆ.25 ರಿಂದ ಸೆ. 8 ರವರೆಗೆ ನಡೆಯುತ್ತಿರುವ ರಾಷ್ಟ್ರೀಯ ನೇತ್ರದಾನ ಪಾಕ್ಷಿಕದ ಪ್ರಯುಕ್ತ ಸೆ.6 ರಂದು ಚಿಗಟೇರಿ ಜಿಲ್ಲಾ ಆಸ್ಪತ್ರೆಯಲ್ಲಿ ಬೆಳಿಗ್ಗೆ ಜಾಥಾ ಹಾಗೂ ವೇದಿಕೆ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.
ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ತ್ರಿಪುಲಾಂಭ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಚಿಗಟೇರಿ ಜಿಲ್ಲಾಸ್ಪತ್ರೆಯ ವೈದ್ಯಕೀಯ ಅಧೀಕ್ಷಕಿ ಡಾ. ನೀಲಾಂಬಿಕೆ, ಜಿಲ್ಲಾ ಮಲೇರಿಯಾಧಿಕಾರಿ ಡಾ.ಮೀನಾಕ್ಷಿ, ಆರ್‍ಸಿಹೆಚ್ ಅಧಿಕಾರಿ ಡಾ. ಶಿವಕುಮಾರ್, ಜಿಲ್ಲಾ ಅಂಧತ್ವ ನಿಯಂತ್ರಣಾಧಿಕಾರಿ ಸಿದ್ದೇಶ್ ಕೋಲ್ಕರ್, ಡಾ. ಅರುಣಾ ಪಾಟಿಲ್, ಡಾ. ಸಂಗೀತ, ಇತರೆ ವೈದ್ಯರು, ಸಿಬ್ಬಂದಿ ಹಾಜರಿದ್ದರು.

Leave a Comment