ರಾಹುಲ್ ಪಟ್ಟಾಭಿಷೇಕ ಇನ್ನಷ್ಟು ವಿಳಂಬ

ನವದೆಹಲಿ, ನ.೧೪- ಯುವ ನಾಯಕ ರಾಹುಲ್ ಗಾಂಧಿಯವರಿಗೆ ಕಾಂಗ್ರೆಸ್ ಅಧ್ಯಕ್ಷ ಪಟ್ಟ ದೊರೆಯುವುದು ಮತ್ತಷ್ಟು ವಿಳಂಬವಾಗಲಿದೆ. ಗುಜರಾತ್ ವಿಧಾನಸಭಾ ಚುನಾವಣೆಯ ನಂತರ ರಾಹುಲ್ ಪಟ್ಟಾಭಿಷೇಕ ನಡೆಯುವ ನಿರೀಕ್ಷೆ ಇದೆ. ದೆಹಲಿಯಲ್ಲಿ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯಲ್ಲಿ ನಾಯಕರು ಚರ್ಚೆ ನಡೆಸಿ ಈ ನಿರ್ಧಾರ ಕೈಗೊಂಡಿದ್ದಾರೆಂದು ಮೂಲಗಳು ತಿಳಿಸಿವೆ.

ಈ ಹಿಂದೆ ದೀಪಾವಳಿ ಹಬ್ಬದ ಬಳಿಕ ಗುಜರಾತ್ ಮತ್ತು ಹಿಮಾಚಲ ಪ್ರದೇಶ ಚುನಾವಣೆಗೆ ಮುನ್ನ ರಾಹುಲ್ ಗಾಂಧಿಯವರಿಗೆ ಅಧ್ಯಕ್ಷ ಪಟ್ಟ ನೀಡಬೇಕೆಂದು ಕಾಂಗ್ರೆಸ್ ನಾಯಕರು ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿಯವರ ಮೇಲೆ ಒತ್ತಡ ಹೇರಿದ್ದರು. ಆದರೆ ಈಗ ಮತ್ತಷ್ಟು ಮುಂದಕ್ಕೆ ಹೋಗಿದೆ.

ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿಯೇ ರಾಹುಲ್ ಗಾಂಧಿಯವರು ಗುಜರಾತ್ ವಿಧಾನಸಭಾ ಚುನಾವಣೆಗೆ ಪ್ರಚಾರ ಕೈಗೊಂಡರೆ ರಾಜಕೀಯವಾಗಿ ಮಹತ್ವ ಪಡೆದುಕೊಳ್ಳಲಿದೆ ಎಂದು ನಾಯಕರು ಪ್ರತಿಪಾದಿಸಿದ್ದರು.

ಗುಜರಾತ್ ವಿಧಾನಸಭಾ ಚುನಾವಣೆಗೆ ಬಿರುಸಿನ ಪ್ರಚಾರ ಕೈಗೊಳ್ಳಲಾಗಿದೆ. ಈ ಸಂದರ್ಭದಲ್ಲಿ ಪಕ್ಷದ ಕಾರ್ಯಕರ್ತರಿಗೆ ಅನವಶ್ಯಕವಾಗಿ ಗೊಂದಲ ಉಂಟು ಮಾಡಲಾರದೆಂಬ ದೃಷ್ಟಿಯಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಹಿರಿಯ ಮುಖಂಡರೊಬ್ಬರು ತಿಳಿಸಿದ್ದಾರೆ.

Leave a Comment