ರಿಕ್ಷಾ-ಬೈಕ್ ಡಿಕ್ಕಿ: ಇಬ್ಬರಿಗೆ ಗಾಯ

ಕಾಪು, ಮಾ.೨೦- ಆಟೋ ರಿಕ್ಷಾ-ಬೈಕ್ ನಡುವೆ ನಡೆದ ಅಪಘಾತದಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಪಡುಬಿದ್ರಿ ಠಾಣಾ ವ್ಯಾಪ್ತಿಯ ಎಲ್ಲೂರು ಕುಕ್ಕಿಕಟ್ಟೆ ಜಂಕ್ಷನ್ ಬಳಿ ನಿನ್ನೆ ರಾತ್ರಿ ಸಂಭವಿಸಿದೆ.

ಎಲ್ಲೂರು ಉಚ್ಚಿಲ ಮಾರ್ಗದಲ್ಲಿ ಎಲ್ಲೂರು ಕಡೆಯಿಂದ ಮುದರಂಗಡಿಗೆ ಹೋಗುತ್ತಿದ್ದ ಬೈಕ್‌ಗೆ ಎದುರಿನಿಂದ ಬರುತ್ತಿದ್ದ ಆಟೋ ರಿಕ್ಷಾ ಮುಖಾಮುಖಿ ಡಿಕ್ಕಿಯಾಗಿ ಸವಾರ ಎಲ್ಲೂರು ನಿವಾಸಿ ಶರಣ್(೨೦) ಗಂಭೀರ ಗಾಯಗೊಂಡಿದ್ದಾರೆ. ರಿಕ್ಷಾ ಚಾಲಕ ಬೆಳ್ಳಿಬೆಟ್ಟು ನಿವಾಸಿ ಬಾಲಕೃಷ್ಣ ಪೂಜಾರಿ(೪೫) ಎಂಬವರು ಕಾಲು ಮುರಿತಕ್ಕೊಳಗಾಗಿದ್ದಾರೆ. ಗಾಯಳುಗಳನ್ನು ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಪಡುಬಿದ್ರಿ ಪೊಲೀಸರು ಆಗಮಿಸಿ ತನಿಖೆ ಮುಂದುವರಿಸಿದ್ದಾರೆ.

Leave a Comment