ರೈಲಿಗೆ ಸಿಕ್ಕಿ ಯುವಕ ಸಾವು

ತಿಪಟೂರು, ಫೆ. ೭- ಚಲಿಸುತ್ತಿದ್ದ ರೈಲಿಗೆ ಸಿಕ್ಕಿ ಯುವಕನೋರ್ವ ಸಾವನ್ನಪ್ಪಿರುವ ಘಟನೆ ಇಲ್ಲಿನ ರೈಲ್ವೆ ನಿಲ್ದಾಣದ ಬಳಿ ನಡೆದಿದೆ.

ಇಲ್ಲಿನ ಬಸವೇಶ್ವರನಗರದ ಶಾಂತರಾಜು (20) ಎಂಬಾತನೇ ಮೃತಪಟ್ಟಿರುವ ದುರ್ದೈವಿ. ಈತ ಸ್ನೇಹಿತನ ಹುಟ್ಟುಹಬ್ಬಕ್ಕೆ ಹೋಗಿದ್ದ ಸಂದರ್ಭದಲ್ಲಿ ಸ್ನೇಹಿತರ ನಡುವೆ ಜಗಳ ನಡೆದಿತ್ತೆನ್ನಲಾಗಿದೆ.

ಆದರೆ ಇಂದು ಬೆಳಿಗ್ಗೆ ರೈಲ್ವೆ ಹಳಿಯಲ್ಲಿ ರೈಲಿಗೆ  ಸಿಕ್ಕಿ ಮೃತಪಟ್ಟಿರುವ ರೀತಿ ಶವ ಪತ್ತೆಯಾಗಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.

ಈ ಸಂಬಂಧ ಅರಸೀಕೆರೆ ರೈಲ್ವೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಜರುಗಿಸುತ್ತಿದ್ದಾರೆ.

Leave a Comment