ರೈಲಿಗೆ ಸಿಲುಕಿ ವ್ಯಕ್ತಿ ಸಾವು

ಬಳ್ಳಾರಿ, ಮೇ.24: ನಗರದ ರೇಡಿಯೋ ಪಾರ್ಕ್ ನಿವಾಸಿ ಶ್ರೀರಾಮಬಾಬು(63) ನಿನ್ನೆ ಚಲಿಸುತ್ತಿದ್ದ ರೈಲಿಗೆ ಸಿಲುಕಿ ಸಾವನ್ನಪ್ಪಿರುವ ಘಟನೆ ನಗರದಲ್ಲಿ‌ ನಡೆದಿದೆ.
ಮೃತ ವ್ಯಕ್ತಿ. ಮದ್ಯಪಾನ ಮಾಡಿ ನಿನ್ನೆ ರೈಲ್ವೆ ಗೇಟ್ನಲ್ಲಿ ನಡೆದುಕೊಂಡು ಹೋಗುವಾಗ ರೈಲು ಡಿಕ್ಕಿ ಹೊಡೆದಿದೆ. ಇದರಿಂದ ತಲೆಗೆ ತೀವ್ರ ಪೆಟ್ಟಾಗಿ ಸ್ಥಳದಲ್ಲಿಯೇ ಆತ ಸಾವನ್ನಪ್ಪಿದ್ದಾನೆ.
ಲಾಕ್ಡೌನ್ ಸಡಿಲಿಕೆ ನಂತರ ಈತ ಅತಿಯಾಗಿ ಮದ್ಯಪಾನ ಮಾಡುತ್ತಿದ್ದ ಎನ್ನಲಾಗಿದೆ. ಸ್ಥಳಕ್ಕೆ ರೈಲ್ವೆ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿದ್ದಾರೆ.

Share

Leave a Comment