ರೈಲು ನಿಲ್ದಾಣದ ಮುಂದೆ ಪ್ರತಿಭಟನೆ ನಾಳೆ

ಕಲಬುರಗಿ ಆ 21: ನೆನೆಗುದಿಗೆ ಬಿದ್ದ ಕಲಬುರಗಿ ರೈಲ್ವೆ ಯೋಜನೆಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸುವಂತೆ ಮತ್ತು ಕಲಬುರಗಿ ರೈಲ್ವೆ ವಿಭಾಗ ಪ್ರಾರಂಭಿಸುವಂತೆ ಆಗ್ರಹಿಸಿ ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯ ಜಾಗೃತಿ ಸಮಿತಿ ನಾಳೆ ( ಆ 22) ಬೆಳಿಗ್ಗೆ 11 ಗಂಟೆಗೆ ರೈಲ್ವೆ ನಿಲ್ದಾಣದ ಎದುರು ಪ್ರತಿಭಟನೆ ನಡೆಸಲಿದೆ.

ಪ್ರತಿಭಟನೆಯ ನಂತರ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಕಚೇರಿಗೆ  ಮನವಿ ಸಲ್ಲಿಸಲಾಗುವದು. ಆ 24 ರಂದು ಸಂಸದ ಮಲ್ಲಿಕಾರ್ಜುನ ಖರ್ಗೆಯವರನ್ನು ಭೇಟಿ ಮಾಡಿ ಕೇಂದ್ರದ ಮೇಲೆ ಒತ್ತಡ ಹಾಕಿ ರೈಲ್ವೆ ಡಿವಿಜನ್ ಕೆಲಸ ಪ್ರಾರಂಭಿಸುವಂತೆ ಮನವಿ ಸಲ್ಲಿಸಲಾಗುವದು ಎಂದು ಸಮಿತಿ ಅಧ್ಯಕ್ಷ ಎಂ ಎಸ್ ಪಾಟೀಲ ನರಿಬೋಳ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಒಂದು ತಿಂಗಳೊಳಗೆ ರೈಲ್ವೆಯ ಯೋಜನೆಗಳನ್ನು ಕೈಗೆತ್ತಿಕೊಳ್ಳದಿದ್ದರೆ ಮತ್ತು ಕಲಬುರಗಿ ರೈಲ್ವೆಗೆ ಸಂಬಂಧಪಟ್ಟ ಸಮಸ್ಯೆಗಳನ್ನು ಪರಿಹರಿಸದಿದ್ದರೆ ಹೋರಾಟ ನಡೆಸಲಾಗುವದು ಎಂದರು..

Leave a Comment