ರೋಹಿತ್ ಬದಲು ಅಜಿಂಕ್ಯ ರಹಾನೆ,ರಾಹುಲ್ ಗೆ ಸ್ಥಾನ?

ನವದೆಹಲಿ, ಫೆ ೧೨- ಆಸ್ಟ್ರೇಲಿಯಾದಲ್ಲಿ ಟೆಸ್ಟ್ ಹಾಗೂ ಏಕದಿನ ಸರಣಿ ಗೆದ್ದ ನಂತ್ರ ಟೀಂ ಇಂಡಿಯಾ ನ್ಯೂಜಿಲ್ಯಾಂಡ್ ವಿರುದ್ಧ ನಡೆದ ಏಕದಿನ ಸರಣಿಯಲ್ಲಿ ಗೆಲುವು ಸಾಧಿಸಿದೆ. ಆದ್ರೆ ಟಿ-20 ಸರಣಿ ಸೋತಿರುವ ಭಾರತ, ಈಗ ತನ್ನ ನೆಲದಲ್ಲಿ ಆಸ್ಟ್ರೇಲಿಯಾ ವಿರುದ್ಧ ಏಕದಿನ ಮತ್ತು ಟಿ-20 ಸರಣಿಯನ್ನಾಡಲಿದೆ.

ಆಸ್ಟ್ರೇಲಿಯಾ ವಿರುದ್ಧ ಫೆಬ್ರವರಿ 24ರಿಂದ ಪಂದ್ಯಗಳು ಶುರುವಾಗಲಿವೆ. ಆಸ್ಟ್ರೇಲಿಯಾ ವಿರುದ್ಧ ಭಾರತ 2 ಟಿ-20 ಪಂದ್ಯ ಹಾಗೂ 5 ಏಕದಿನ ಪಂದ್ಯಗಳನ್ನು ಆಡಲಿದೆ.

ರೋಹಿತ್ ಶರ್ಮಾಗೆ ವಿಶ್ರಾಂತಿ ನೀಡಲು ನಿರ್ಧರಿಸಲಾಗಿದೆ ಎಂಬ ಸುದ್ದಿ ಬಂದಿದೆ. ನಾಯಕ ವಿರಾಟ್ ಕೊಹ್ಲಿ ಮೈದಾನಕ್ಕಿಳಿಯಲಿದ್ದಾರೆ. ರೋಹಿತ್ ಶರ್ಮಾ ಬದಲು ಅಜಿಂಕ್ಯ ರಹಾನೆಗೆ ಸ್ಥಾನ ಸಿಗುವ ಸಾಧ್ಯತೆಯಿದೆ.

ರಹಾನೆ ಕಳೆದ ಒಂದು ವರ್ಷಗಳಿಂದ ಏಕದಿನ ತಂಡದಿಂದ ಹೊರಗಿದ್ದಾರೆ. ಫೆಬ್ರವರಿಯಲ್ಲಿ ದಕ್ಷಿಣ ಆಪ್ರಿಕಾ ವಿರುದ್ಧ ಅವ್ರು ಮೈದಾನಕ್ಕಿಳಿದಿದ್ದರು. ಟಿವಿ ಕಾರ್ಯಕ್ರಮದ ಮೂಲಕ ವಿವಾದ ಮೈಮೇಲೆಳೆದುಕೊಂಡಿದ್ದ ಕೆ.ಎಲ್. ರಾಹುಲ್ ಗೆ ತಂಡದಲ್ಲಿ ಸ್ಥಾನ ಸಿಗುವ ಸಾಧ್ಯತೆಯಿದೆ. ಇನ್ನು ನ್ಯೂಜಿಲ್ಯಾಂಡ್ ಪ್ರವಾಸದಲ್ಲಿ ವಿಶ್ರಾಂತಿ ಪಡೆದಿದ್ದ ಜಸ್ಪ್ರಿತ್ ಬೂಮ್ರಾ ತಂಡಕ್ಕೆ ವಾಪಸ್ ಆಗುವ ಸಾಧ್ಯತೆಯಿದೆ. ಭಾರತ ನವೆಂಬರ್ ತಿಂಗಳಿನಿಂದ ನಿರಂತರವಾಗಿ ಆಟವಾಡ್ತಿದೆ. ಹಾಗಾಗಿ ಬಿಸಿಸಿಐ ಕೆಲ ದಿಗ್ಗಜ ಆಟಗಾರರಿಗೆ ವಿಶ್ರಾಂತಿ ನೀಡುವ ಸಾಧ್ಯತೆಯಿದೆ.

Leave a Comment