ರೌಡಿಶೀಟರ್ ಪರೇಡ್ ನಡೆಸಿದ ಎಸ್ಪಿ

 

ಕಲಬುರಗಿ,ಸೆ.12-ಗಣೇಶ ಚತುರ್ಥಿ ಹಿನ್ನೆಲೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ಶಶಿಕುಮಾರ ಅವರು ನಗರದ ಪೊಲೀಸ್ ಪರೇಡ್ ಮೈದಾನದಲ್ಲಿಂದು ರೌಡಿಶೀಟರ್ ಗಳ ಪರೇಡ್ ನಡೆಸಿದರು.

ಕೊಲೆ, ಸುಲಿಗೆ, ಅತ್ಯಾಚಾರ, ದರೋಡೆ ಪ್ರಕರಣಗಳಲ್ಲಿ ಭಾಗಿಯಾದ 400 ಜನ ರೌಡಿಶೀಟರ್ ಗಳ ಪರೇಡ್ ನಡೆಸಿ ಗಣೇಶ ಪ್ರತಿಷ್ಠಾಪನೆ ಮತ್ತು ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆ ನಡೆಸಿದರೆ ಸೂಕ್ತ ಕ್ರಮ ಜರುಗಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.

ಪೊಲೀಸ್ ಪರೇಡ್ ಮೈದಾನದಲ್ಲಿ 400 ಜನ ರೌಡಿಶೀಟರ್ ಗಳ ಪರೇಡ್ ನಡೆಸಲಾಗಿದ್ದು, ಜಿಲ್ಲೆಯ ಆಯಾ ತಾಲ್ಲೂಕು ಕೇಂದ್ರ ಮತ್ತು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ  600 ಜನ ಸೇರಿದಂತೆ ಒಟ್ಟು 1000 ಜನ ರೌಡಿಶೀಟರ್ ಗಳ  ಪರೇಡ್ ನಡೆಸಲಾಗಿದೆ ಎಂದು ತಿಳಿಸಿದರು.

Leave a Comment