ಲಾರಿಗೆ ಬೈಕ್ ಡಿಕ್ಕಿ ಇಬ್ಬರು ದಾರುಣ ಸಾವು

ಬೆಂಗಳೂರು,ಆ.೨೮-ಮುಂದೆ ಹೋಗುತ್ತಿದ್ದ ಕ್ಯಾಂಟರ್ ಲಾರಿ ಏಕಾಎಕಿ ಬ್ರೇಕ್ ಹಾಕಿದ್ದರಿಂದ ಹಿಂದಿನಿಂದ ಬಂದ ಬೈಕ್ ಡಿಕ್ಕಿ ಹೊಡೆದು ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ನೆಲಮಂಗಲದ ಟಿ.ಬೇಗೂರು ಬಳಿ ನಡೆದಿದೆ.
ತುಮಕೂರು ಜಿಲ್ಲೆ ಕೊರಟಗೆರೆಯ ಎತ್ತಗಾನಹಳ್ಳಿ ನಿವಾಸಿ ಅರುಣ್ ಕುಮಾರ್ (೩೨) ಮತ್ತು ಮಧುಗಿರಿಯ ಹರೀಶ್ ಬಾಬು(೩೧) ಮೃತ ದುರ್ದೈವಿಗಳಾಗಿದ್ದಾರೆ.

ಕೊರಟಗೆರೆಯಿಂದ ಬೆಂಗಳೂರಿಗೆ ಬೈಕ್‌ನಲ್ಲಿ ಹೋಗುತ್ತಿದ್ದ ಇವರಿಬ್ಬರೂ ಟಿ.ಬೇಗೂರಿನ ತಾಳೇಕೆರೆ ಕ್ರಾಸ್ ಬಳಿ ಮುಂದೆ ಹೋಗುತ್ತಿದ್ದ ಕ್ಯಾಂಟರ್ ಲಾರಿ ದಿಢೀರ್ ಬ್ರೇಕ್ ಹಾಕಿದ್ದರಿಂದ ಹಿಂದಿನಿಂದ ಡಿಕ್ಕಿ ಹೊಡೆದು ಕೆಳಗೆಬದ್ದು ಗಂಭೀರವಾಗಿ ಗಾಯಗೊಂಡಿದ್ದಾರೆ.

ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ನೆಲಮಂಗಲ ಸಂಚಾರ ಪೊಲೀಸರು ಪ್ರಕರಣ ದಾಖಲಿಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ.

Leave a Comment