ಲಾರಿ-ಕಾರು ಡಿಕ್ಕಿ: ಕಾರು ಚಾಲಕ ಸಾವು

 

ಬಸವಕಲ್ಯಾಣ,ಜ.12-ಲಾರಿ ಮತ್ತು ಕಾರು ನಡುವೆ ಡಿಕ್ಕಿ ಸಂಭವಿಸಿ ಕಾರು ಚಾಲಕ ಸ್ಥಳದಲ್ಲಿಯೇ ಮೃತಪಟ್ಟು, ಕಾರಿನಲ್ಲಿದ್ದ ಇನ್ನೊಬ್ಬ ವ್ಯಕ್ತಿ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ 9ರ ಮೇಲೆ ಬರುವ ಬಸವಕಲ್ಯಾಣ ಪಟ್ಟಣದ ಇಂಜಿನಿಯರಿಂಗ್ ಕಾಲೇಜು ಹತ್ತಿರ ತಡರಾತ್ರಿ ನಡೆದಿದೆ.

ಮೃತನನ್ನು ಸುನೀಲರೆಡ್ಡಿ ನಾರಾಯಣಪುರ (32) ಎಂದು ಗುರುತಿಸಲಾಗಿದ್ದು, ಗಾಯಗೊಂಡಿರುವ ದತ್ತು ನರ್ಸಿಂಗ್ ಅವರನ್ನು ಸೊಲ್ಲಾಪುರ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಅಪಘಾತ ಸಂಭವಿಸಿದ ನಂತರ ಲಾರಿ ಚಾಲಕ ಲಾರಿಯನ್ನು ಸ್ಥಳದಲ್ಲಿಯೇ ಬಿಟ್ಟು ಪರಾರಿಯಾಗಿದ್ದಾನೆ. ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆದಿದೆ.

Leave a Comment