ಲಾರಿ ಹರಿದು ಮೂವರು ಸಾವು

ಬೀದರ್, ಜ. 22 – ಲಾರಿ ಹರಿದು ಮೂವರು ಮೃತಪಟ್ಟಿರುವ ಘಟನೆ ಬೀದರ್ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 09ರ ಮಿನಕೇರಾ ಕ್ರಾಸ್ ಬಳಿ ಬುಧವಾರ ನಸುಕಿನ ಜಾವ 4 ಗಂಟೆ ಸುಮಾರಿಗೆ ಸಂಭವಿಸಿದೆ.

ಮೃತರನ್ನು ಅನ್ಸರ್ ಬಸಂತಪೂರ್, ವಿಜಯ ಕುಮಾರ್ ಬಸಂತಪೂರ್ ಮತ್ತು ಇಸ್ಮಾಯೀಲ್ ಎಂದು ಗುರುತಿಸಲಾಗಿದೆ.

ಮೃತರು ಗೂಡ್ಸ್ ಕ್ಯಾರಿಯರ್ ವಾಹನದಲ್ಲಿ ಈರುಳ್ಳಿ ತುಂಬಿಕೊಂಡು ಹೈದರಾಬಾದ್ ಕಡೆಗೆ ತೆರಳುತ್ತಿದ್ದರು. ವಾಹನ ಪಂಕ್ಚರ್ ಆಗಿದ್ದರಿಂದ ಮಿನಕೇರಾ ಕ್ರಾಸ್ ಬಳಿಯ ಫ್ಲೈಓವರ್ ಮೇಲೆ ವಾಹನ ನಿಲ್ಲಿಸಿ ಪಂಕ್ಚರ್ ಹಾಕುತ್ತಿದ್ದಾಗ ಈ ಮಾರ್ಗದಲ್ಲಿ ಬಂದ ಲಾರಿ ಹರಿದು ದುರ್ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ.

ಘಟನಾ ಸ್ಥಳಕ್ಕೆ ಬೀದರ್ ಗ್ರಾಮೀಣ ಪೊಲೀಸ ಠಾಣೆಯ ಸಿಪಿಐ ಸಾವಳಗಿ ಹಾಗೂ ಬಗದಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave a Comment