ಲಾಲೂ ಪ್ರಸಾದ್ ಯಾದವ್ ಗೆ ಜಾಮೀನು

ನವದೆಹಲಿ, ಜು.12: ಮೇವು ಹಗರಣಕ್ಕೆ ಸಂಬಂಧಿಸಿ ಆರ್ ಜೆಡಿ ನಾಯಕ ಲಾಲೂ ಪ್ರಸಾದ್ ಯಾದವ್ ರಿಗೆ ಜಾರ್ಖಂಡ್ ಹೈಕೋರ್ಟ್ ಇಂದು ಜಾಮೀನು ಮಂಜೂರು ಮಾಡಿದೆ.

ಬಹುಕೋಟಿ ಮೇವು ಹಗರಣಕ್ಕೆ ಸಂಬಂಧಿಸಿ ಲಾಲೂ ಮೂರು ಇತರ ಪ್ರಕರಣಗಳಲ್ಲಿ ಜೈಲುಶಿಕ್ಷೆಯನ್ನು ಎದುರಿಸುತ್ತಿದ್ದಾರೆ.

ಆರೋಗ್ಯ ಸಮಸ್ಯೆ ಮತ್ತು ತನ್ನ ವಯಸ್ಸಿನ ಹಿನ್ನೆಲೆಯಲ್ಲಿ ಜಾಮೀನು ಮಂಜೂರು ಮಾಡುವಂತೆ ಜೂನ್ 13ರಂದು ಲಾಲೂ ಪ್ರಸಾದ್ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.

Leave a Comment