ಲೋಕ ಚುನಾಣೆಗೆ ಸ್ಥರ್ಧೆ; ಇನ್ನೂ ನಿರ್ಧರಿಸಿಲ್ಲ ಎಚ್‌ಡಿಡಿ

ಹಾಸನ, ಜ ೧೧- ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಕುರಿತು ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಜೆಡಿಎಸ್ ವರಿಷ್ಠ ಎಚ್.ಡಿ ದೇವೇಗೌಡ ಹೇಳಿದ್ದಾರೆ.
ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಲೋಕಸಭೆ ಚುನಾವಣೆಯಲ್ಲೂ ಕಾಂಗ್ರೆಸ್‌ನೊಂದಿಗೆ ಮೈತ್ರಿ ಮುಂದುವರಿಯುತ್ತದೆ. ಜೆಡಿಎಸ್‌ಗೆ ಎಷ್ಟು ಸೀಟು ಕೊಡುತ್ತಾರೋ ಗೊತ್ತಿಲ್ಲ. ಈ ಬಗ್ಗೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಜೊತೆ ಚರ್ಚಿಸಿ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದರು.
ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ತಾವು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಕುರಿಗು ನಿರ್ಧಾರ ಕೈಗೊಂಡಿಲ್ಲ ಎಂದು ಹೇಳುವ ಮೂಲಕ ಗೌಡರು ಕುತೂಹಲ ಕಾಯ್ದುಕೊಂಡಿದ್ದಾರೆ.
ಇತ್ತೀಚೆಗೆ ಪ್ರಧಾನಿ ಮೋದಿಯವರ ಜನಪ್ರಿಯತೆ ಕುಗ್ಗುತ್ತಿದೆ, ಇದಕ್ಕಾಗಿ ಆರ್ಥಿಕವಾಗಿ ಹಿಂದುಳಿದ ಮೇಲ್ವರ್ಗದ ಜಾತಿಯವರಿಗೆ ಮೀಸಲು ಅಸ್ತ್ರ ಬಳಸಲಾಗಿದೆ. ಚುನಾವಣೆಯಲ್ಲಿ ಗೆಲ್ಲುವ ಉದ್ದೇಶದಿಂದ ಪ್ರಧಾನಿ ಹೀಗೆ ಮಾಡಿದ್ದಾರೆ. ಈ ಕಾರಣಕ್ಕಾಗಿಯೆ ಇತರ ಪಕ್ಷಗಳು ಚಕಾರವೆತ್ತದೆ ಬೆಂಬಲಿಸಿದ್ದಾರೆ ಎಂದು ತಿಳಿಸಿದರು.
ಸಿಬಿಐ ಆಂತರಿಕ ಕಿತ್ತಾಟ ಹಾಗೂ ನಿರ್ದೇಶಕರ ವರ್ಗಾವಣೆ ಕುರಿತು ಪ್ರತಿಕ್ರಿಯಿಸಿದ ಅವರು, ಇಬ್ಬರು ಹಿರಿಯ ಅಧಿಕಾರಿಗಳು ಪರಸ್ಪರ ಆಪಾದನೆ ಮಾಡಿದರು. ಬಳಿಕ ಈ ಪ್ರಕರಣ ಸುಪ್ರೀಂಕೋರ್ಟ್ ಮೆಟ್ಟಿಲೇರಿತ್ತು. ಇದು ಕೇವಲ ತಾಂತ್ರಿಕ ವಿಚಾರವಾಗಿದ್ದು, ಸಿಬಿಐ ಸೇರಿ ಅನೇಕ ಸ್ವಾಯತ್ತ ಸಂಸ್ಥೆಗಳ ದುರ್ಬಳಕೆ ಹೊಸದಲ್ಲ. ಇತ್ತೀಚಿನ ದಿನಗಳಲ್ಲಿ ಇದು ಹೆಚ್ಚಾಗಿದೆ ಎಂದು ಅಸಮಾಧಾನ ಹೊರಹಾಕಿದರು..

Leave a Comment