ವಾಣಿಜ್ಯೋದ್ಯಮ ಸಂಘ : 3 ವಿಷಯ ಕುರಿತು ಕಾರ್ಯಾಗಾರ

ರಾಯಚೂರು.ಅ.10- ಜಿಲ್ಲಾ ವಾಣಿಜ್ಯೋದ್ಯಮ ಸಂಘ ಹಾಗೂ ಎಫ್‌ಕೆಸಿಸಿಐ ವತಿಯಿಂದ ನಗರದಲ್ಲಿ ಮೂರು ವಿಷಯ ಕುರಿತು ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆಂದು ವಾಣಿಜ್ಯೋದ್ಯಮ ಸಂಘದ ಜಿಲ್ಲಾಧ್ಯಕ್ಷ ತ್ರಿವಿಕ್ರಮ ಜೋಶಿ ಹೇಳಿದರು.
ಅವರಿಂದು ಸುದ್ದಿಗಾರರೊಂದಿಗೆ ಮಾತನಾಡಿ ಈ ಭಾಗದ ಕೈಗಾರಿಕೆ ಹಾಗೂ ವಾಣಿಜ್ಯೋದ್ಯಮ ಅಭಿವೃದ್ಧಿ ಪಡಿಸಲು, ಸಮಸ್ಯೆಗಳ ಬಗ್ಗೆ ಸುದಿರ್ಘವಾಗಿ ಚರ್ಚಿಸಲು ಅ.11 ಮತ್ತು 12 ರಂದು ಸಮಾವೇಶವನ್ನು ಆಯೋಜಿಸಲಾಗಿದೆ. 10 ವರ್ಷದ ಹಿಂದೆ ಜಿಲ್ಲೆಯಲ್ಲಿ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ಕಲ್ಯಾಣ ಕರ್ನಾಟಕ ಭಾಗದಲ್ಲಿ ಬರುವ ರಾಯಚೂರು, ಕೊಪ್ಪಳ, ಬಳ್ಳಾರಿ, ಗುಲ್ಬರ್ಗಾ, ಬೀದರ್ ಹಾಗೂ ಯಾದಗಿರಿ ಜಿಲ್ಲೆಯ ವಾಣಿಜ್ಯೋದ್ಯಮದ ಪದಾಧಿಕಾರಿಗಳು ಸಮಾವೇಶದಲ್ಲಿ ಭಾಗವಹಿಸಲಿದ್ದಾರೆಂದರು.
ಅ.12 ರಂದು ಸಮಾವೇಶವನ್ನು ಸಂಸದ ರಾಜಾ ಅಮರೇಶ್ವರ ನಾಯಕ ಉದ್ಘಾಟಿಸುವರು. ಕಾರ್ಯಕ್ರಮವನ್ನು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಆಯೋಜಿಸಲಾಗಿದೆ, ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ಆದಿಮನಿ ವೀರಲಕ್ಷ್ಮೀ, ಜಿಲ್ಲಾಧಿಕಾರಿ ಆರ್.ವೆಂಕಟೇಶ, ರೈಸ್ ಮಿಲ್ ಅಧ್ಯಕ್ಷ ಎ.ಪಾಪಾರೆಡ್ಡಿ, ಎಫ್‌ಕೆಸಿಸಿಐ ಅಧ್ಯಕ್ಷ ಸಿ.ಆರ್‌. ಜನಾರ್ಧನ್, ಶಿಲ್ಪಾ ಮೆಡಿಕೇರ್ ಅಧ್ಯಕ್ಷ ವಿಷ್ಣುಕಾಂತ ಬುತಡಾ ಭಾಗವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಎಪಿಎಂಸಿ, ಕೈಗಾರಿಕೆ ಹಾಗೂ ಜಿಎಸ್‌ಟಿ ವಿಷಯ ಕುರಿತು ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿದೆ. ಜಿಲ್ಲೆಯ ವಿವಿಧ 28 ಸಂಘಟನೆಗಳು ಭಾಗವಹಿಸಲಿದ್ದು, ಅ.11 ರಂದು ನಗರದ ನೃಪತುಂಗ ಹೋಟೆಲ್‌ನಲ್ಲಿ ವಾಣಿಜ್ಯೋದ್ಯಮ ಸಂಘದ ಪದಾಧಿಕಾರಿಗಳ ಸಭೆ ನಡೆಯಲಿದೆಂದು ತಿಳಿಸಿದರು.
ಈ ಸಂದರ್ಭದಲ್ಲಿ ಜಗದೀಶ ಗುಪ್ತಾ, ಹರವಿ ನಾರಾಯಣ ಗೌಡ, ಮಲ್ಲಿಕಾರ್ಜುನ ದೋತರಬಂಡಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Leave a Comment