ವಾರ್ಡ್ ಸಮಿತಿ ರಚನೆ: ಉತ್ತಮ ಪ್ರಜೆ ಆಯ್ಕೆಗೆ ಮನವಿ

ಹುಬ್ಬಳ್ಳಿ,ಸೆ 22- ಹು-ಧಾ ಮಹಾನಗರ ಪಾಲಿಕೆಯ ವಲಯ ವ್ಯಾಪ್ತಿಯಲ್ಲಿ ವಾರ್ಡ್ ಸಮಿತಿಯನ್ನು ರಚಿಸುವಲ್ಲಿ ಉತ್ತಮ ಪ್ರಜೆಯನ್ನು ಆಯ್ಕೆ ಮಾಡಿ ಜನರ ಹಿತಾಸಕ್ತಿಯನ್ನು ಕಾಪಾಡಬೇಕೆಂದು ಹು-ಧಾ ಸೋಶಿಯಲ್ ವೆಲ್ಪೇರ್ ಅಸೊಶಿಯೇಶನ್, ಹು-ಧಾ ಮಹಾನಗರ ಪಾಲಿಕೆ ಆಯುಕ್ತರಿಗೆ ಮನವಿ ಮಾಡಿದೆ.
ಹು-ಧಾ ಮಹಾನಗರ ಪಾಲಿಕೆ ಹೆಚ್ಚು ಹೆಚ್ಚು ಅಭಿವೃದ್ಧಿ ಕಾರ್ಯಗಳನ್ನು ಮಾಡುತ್ತಾ ಬಂದಿರುವುದು ಶ್ಲಾಘನೀಯವಾಗಿದೆ. ಅಲ್ಲದೇ  ಮಹಾನಗರ ಪಾಲಿಕೆಯ ಉಲ್ಲೇಖಿತ ಸಂಖ್ಯೆ ಎಚ್.ಡಿ.ಎಂ.ಸಿ.130101919 ಸಾರ್ವಜನಿಕ ಪ್ರಕಟಣೆಯಲ್ಲಿ ತಿಳಿಸಿರುವಂತೆ  ಮಹಾನಗರ ಪಾಲಿಕೆಯ ವಲಯ ವ್ಯಾಪ್ತಿಯಲ್ಲಿ ವಾರ್ಡ್ ಸಮಿತಿ  ರಚನೆಯಲ್ಲಿ ಉತ್ತಮ ಪ್ರಜೆಗಳನ್ನು ಆಯ್ಕೆ ಮಾಡಬೇಕು. ಈಗಾಗಲೇ ಕಚೇರಿಗೆ ಸಾಕಷ್ಟು ಅರ್ಜಿಗಳು ಬಂದಿದ್ದರೂ ಕೂಡ ಯಾವುದೇ ಒತ್ತಡಕ್ಕೆ ಮಣಿಯದೇ ಪಾರದರ್ಶಕ ತಂತ್ರದ ಮೂಲಕ ಹು-ಧಾ ಮಹಾನಗರ ಪಾಲಿಕೆ ವಾರ್ಡಗಳಲ್ಲಿರುವ ಉತ್ತಮ ಪ್ರಜೆಯನ್ನು ಆಯ್ಕೆ ಮಾಡಬೇಕೆಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Comment