ವಾಹನ ಡಿಕ್ಕಿ: ಬೈಕ್ ಸವಾರ ಸಾವು

ಕಲಬುರಗಿ,ಸೆ.23-ಅಫಜಲಪುರ ಪೊಲೀಸ್ ಠಾಣೆ ವ್ಯಾಪ್ತಿಯ ಶಿರವಾಳ ಕ್ರಾಸ್ ಹತ್ತಿರ ವಾಹನ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಬೈಕ್ ಸವಾರ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾನೆ.

ಅಫಜಲಪುರ ತಾಲ್ಲೂಕಿನ ಉಡಚಾಣ ಗ್ರಾಮದ ಯೋಗಿರಾಜ ಸಿದ್ಧಪ್ಪ ಗಿರಣಿ ಮೃತಪಟ್ಟವರು. ಅಫಜಲಪುರದಿಂದ ಉಡಚಾಣ ಗ್ರಾಮಕ್ಕೆ ಬೈಕ್ ಮೇಲೆ ಹೋಗುತ್ತಿದ್ದಾಗ ಶಿರವಾಳ ಕ್ರಾಸ್ ಹತ್ತಿರ ವಾಹನ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಯೋಗಿರಾಜ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ. ಅಫಜಲಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Comment