ವಾಹನ ಡಿಕ್ಕಿ: ವ್ಯಕ್ತಿ ಸಾವು

ಕುಣಿಗಲ್, ಸೆ. ೧೦- ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 75ರ ಕೈಗಾರಿಕಾ ವಸಾಹತು ಅಂಚೆಪಾಳ್ಯದಲ್ಲಿ ನಡೆದಿದೆ.

ಮೃತರನ್ನು ಸಿದ್ದೇಮಣ್ಣಿನಪಾಳ್ಯದ ಸುರೇಶ್ (40) ಎಂದು ಗುರುತಿಸಲಾಗಿದೆ. ಇವರಿಗೆ ತಾಲ್ಲೂಕಿನ ವ್ಯಾಪ್ತಿಯ ಅಂಚೆಪಾಳ್ಯದ ಸಮೀಪ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದಿದ್ದರ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಈ ಸಂಬಂಧ ಕುಣಿಗಲ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

Leave a Comment