ವಿಚಾರಣೆಗೆ ಹಾಜರಾಗಲು ಕಾಲಾವಕಾಶ ಕೇಳಿದ ನಟಿ ಸಂಜನಾ

ಬೆಂಗಳೂರು, ಜ 24 – ಸ್ಯಾಂಡಲ್ ವುಡ್ ನಟಿ ಸಂಜನಾ ಗಲ್ರಾನಿ, ಕಾರು ಚಲಾಯಿಸುತ್ತಿದ್ದಾಗ ಸೆಲ್ಫಿ ವಿಡಿಯೋ ಮಾಡಿದ್ದ ಪ್ರಕರಣ‌ಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗಲು ಕಾಲಾವಕಾಶ ಕೇಳಿದ್ದಾರೆ.

ಇಂದು ಹಾಜರಾಗುವಂತೆ ನಟಿ ಸಂಜನಾ ಅವರಿಗೆ ಬನಶಂಕರಿ ಸಂಚಾರಿ ಪೊಲೀಸರು ನೋಟಿಸ್ ಜಾರಿ ಮಾಡಿದ್ದರು. ಸದ್ಯ ಚಿತ್ರವೊಂದರ ಚಿತ್ರೀಕರಣದ ನಿಮಿತ್ಯ ಸಂಜನಾ ದುಬೈಗೆ ತೆರಳಿದ್ದು, ಈ ಹಿನ್ನೆಲೆ ಇಂದು ವಿಚಾರಣೆಗೆ ಹಾಜರಾಗಲು ಸಾಧ್ಯವಾಗದ ಕಾರಣ ಚಿತ್ರೀಕರಣ ಮುಗಿಸಿ ಬೆಂಗಳೂರಿಗೆ ಮರಳಿದ ಬಳಿಕ ವಿಚಾರಣೆಗೆ ಹಾಜರಾಗುವುದಾಗಿ ತಿಳಿಸಿದ್ದಾರೆ.

ಇತ್ತೀಚೆಗೆ ಸಂಜನಾ ಅವರ ಸೆಲ್ಫಿ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು‌. ಅದನ್ನು ಗಂಭೀರವಾಗಿ ಪರಿಗಣಿಸಿದ್ದ ಸಂಚಾರಿ ಪೊಲೀಸರು ಈ ಬಗ್ಗೆ ಸ್ಪಷ್ಟನೆ ನೀಡುವಂತೆ ನೋಟಿಸ್ ಜಾರಿ ಮಾಡಿದ್ದರು.

ಬೆಂಗಳೂರಿನಲ್ಲಿ ದುಬಾರಿ ಕಾರಿನಲ್ಲಿ ಸಂಚಾರ ಮಾಡುತ್ತಾ ಸಂಜನಾ ಸೆಲ್ಫಿ ವಿಡಿಯೋ ಮಾಡಿದ್ದರು. ಇದಕ್ಕೆ ನೆಟ್ಟಿಗರಿಂದ ವ್ಯಾಪಕ ವಿರೋಧ ವ್ಯಕ್ತವಾಗಿತ್ತು.

Leave a Comment