ವಿದೇಶ ಪ್ರವಾಸ ಹೊರಟ ಸಿದ್ದು

(ನಮ್ಮ ಪ್ರತಿನಿಧಿಯಿಂದ)
ಬೆಂಗಳೂರು, ಸೆ.೩- ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿದೇಶ ಪಯಣ ಬೆಳೆಸಿದ್ದಾರೆ.
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಪುತ್ರ ಶಾಸಕ ಡಾ.ಯತೀಂದ್ರ, ವಿಧಾನ ಪರಿಷತ್ ಸದಸ್ಯ ಗೋವಿಂದ ರಾಜ್, ಹಾಗೂ ಅವರ ಪುತ್ರ ಸೇರಿ ನಾಲ್ವರು ವಿದೇಶಕ್ಕೆ ತೆರಳಿದ್ದಾರೆ.
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೆಲ ಕಾಂಗ್ರೆಸ್ ಶಾಸಕರು ವಿದೇಶ ಪ್ರವಾಸ ತೆರಳಲಿದ್ದಾರೆ. ಎಂಬ ವದಂತಿಗಳು ಸುಳ್ಳಾಗಿದೆ.
ಜರ್ಮನಿ, ಫ್ರಾನ್ಸ್, ಇಂಗ್ಲೆಂಡ್, ರಷ್ಯಾ, ದೇಶಗಳಿಗೆ ಭೇಟಿ ನೀಡಿ ಇದೇ ತಿಂಗಳ 15 ರಂದು ಬೆಂಗಳೂರಿಗೆ ಸಿದ್ದು ವಾಪಸ್ ಆಗಲಿದ್ದಾರೆ.
ಸರ್ಕಾರ ಪಥನ ?
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ರವರು ವಿದೇಶ ಪ್ರವಾಸದ ಸಂದರ್ಭದಲ್ಲಿ ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಪತನವಾಗಲಿದೆ. ಕೆಲ ಶಾಸಕರು ರಾಜೀನಾಮೆ ನೀಡಲಿದ್ದಾರೆ ಎಂಬ ಗುಮಾನಿ ರಾಜಕೀಯ ವಲಯದಲ್ಲಿ ಕೇಳಿ ಬಂದಿದೆ. ವಿದೇಶದಲ್ಲೇ ಕುಳಿತು ಸಿದ್ದರಾಮಯ್ಯ ರಾಜಕೀಯ ದಾಳ ಉರುಳಿಸಿ ಸರ್ಕಾರ ಉರಳಿಸಲಿದ್ದಾರೆಯೇ ಎಂಬುದು ಕುತೂಹಲ ಮೂಡಿಸಿದೆ.
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿದೇಶ ಪ್ರವಾಸದ ಸಂದರ್ಭದಲ್ಲಿ ಸರ್ಕಾರಕ್ಕೆ ಯಾವುದೇ ಭಾದಕವಾಗದಂತೆ ನೋಡಿಕೊಳ್ಳಿ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಇತ್ತೀಚೆಗೆ ದೆಹಲಿಗೆ ತೆರಳಿದ್ದಾಗ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ರವರಿಗೆ ಮನವಿ ಮಾಡಿದ್ದರು.
ಈ ಎಲ್ಲಾ ಹಿನ್ನೆಲೆಯಲ್ಲಿ ಸಿದ್ದರಾಮಯ್ಯನವರ ವಿದೇಶ ಪ್ರವಾಸ ರಾಜ್ಯ ರಾಜಕೀಯದಲ್ಲಿ ಬದಲಾವಣೆಗೆ ಕಾರಣವಾಗಲಿದೆಯೇ ಎಂಬುದು ಕುತೂಹಲ ಮೂಡಿಸಿದೆ.

Leave a Comment