ವಿದ್ಯಾಭ್ಯಾಸದ ಜೊತೆಗೆ ಉದಾತ್ತ ಗುಣಗಳನ್ನು ಮೈಗೂಡಿಸಿಕೊಳ್ಳಿ

ಹನೂರು: ಜು.18- ಕ್ರಿಸ್ತರಾಜ ಶಾಲೆ ಹಾಗೂ ಕಾಲೇಜಿನ ವಿದ್ಯಾರ್ಥಿಗಳಲ್ಲಿನ ಶಿಸ್ತು ಮಾದರಿಯಾದದ್ದು ಎಂದು ಮಾನಸ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಅಶ್ವತ್ ನಾರಾಯಣ್ ಅಭಿಪ್ರಾಯ ಪಟ್ಟರು.
ಹನೂರು ಪಟ್ಟಣದ ಕ್ರಿಸ್ತರಾಜ ಪದವಿ ಪೂರ್ವಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮದಲ್ಲಿ ಪಾಲ್ಗೊಂಡು ನಂತರ ಮಾತನಾಡಿದರು. ಕ್ರಿಸ್ತರಾಜ ವಿದ್ಯಾ ಸಂಸ್ಥೆ ಅನೇಕ ವಿದ್ಯಾರ್ಥಿಗಳ ಜೀವನಕ್ಕೆ ದಾರಿ ದೀಪವಾಗಿದೆ. ಇಲ್ಲಿ ನೀಡುವ ಶಿಕ್ಷಣ ಹಾಗೂ ಶಿಸ್ತು ವಿದ್ಯಾರ್ಥಿಗಳನ್ನು ಪ್ರಬುದ್ಧರನ್ನಾಗಿಸಿದೆ. ಪ್ರಥಮ ಪಿಯುಸಿ ತರಗತಿಗೆ ಪಾದಾರ್ಪಣೆ ಮಾಡಿರುವ ವಿದ್ಯಾರ್ಥಿಗಳು ಮುಂದಿನ ದಿನಗಳಲ್ಲಿ ಚೆನ್ನಾಗಿ ವಿದ್ಯಾಭ್ಯಾಸ ಮಾಡುವುದರ ಜೊತೆಗೆ ಉದಾತ್ತ ಗುಣಗಳನ್ನು ಮೈಗೂಡಿಸಿಕೊಂಡು ಕಾಲೇಜು, ಉಪನ್ಯಾಸಕರು ಹಾಗೂ ಪೋಷಕರಿಗೆ ಕೀರ್ತಿತರುವಂತೆ ಸಲಹೆ ನೀಡಿಶುಭ ಹಾರೈಸಿದರು.
ಕಾರ್ಯಕ್ರಮದಲ್ಲಿ ಕ್ರಿಸ್ತರಾಜಕಾಲೇಜು ವತಿಯಿಂದ ಮಾನಸ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಅಶ್ವತ್ ನಾರಾಯಣ್‍ರವರಿಗೆ ಸನ್ಮಾನಿಸಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಸಿಸ್ಟರ್ ಶಾಂತಿ, ಉಪನ್ಯಾಸಕರಾದ ಪ್ರಕಾಶ್, ಸೋಮಣ್ಣ, ವಿನೋದ್, ಇನ್ನಿತರೆ ಉಪನ್ಯಾಸಕ ವರ್ಗ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Leave a Comment