ವಿದ್ಯಾರ್ಥಿಗಳಿಗೆ ಅಂಕ ಗಳಿಕೆ ಮುಖ್ಯವಲ್ಲ

ಹರಪನಹಳ್ಳಿ.ಸೆ.8; ವಿದ್ಯಾರ್ಥಿಗಳಿಗೆ ಅಂಕ ಗಳಿಕೆ ಮುಖ್ಯವಲ್ಲ, ಬಾಹ್ಯ ಜ್ಞಾನ ಪಡೆಯಬೇಕು. ಇಂದು ತಂತ್ರಜ್ಞಾನ ಮುಂದುವರೆದಿದ್ದು, ಅದನ್ನು ದುರುಪಯೋಗ ಮಾಡಿಕೊಳ್ಳದೇ ಸದುಪಯೋಗ ಪಡೆದುಕೊಳ್ಳಬೇಕು ಎಂದು ಶಾಸಕ ಜಿ.ಕರುಣಾಕರರೆಡ್ಡಿ ಹೇಳಿದರು.ಪಟ್ಟಣದ ಉಜ್ಜಯಿನಿ ಜಗದ್ಗುರು ಮರುಳಾರಾಧ್ಯ ಪದವಿಪೂರ್ವ ಮಹಾವಿದ್ಯಾಲಯದ 2018-19ನೇ ಸಾಲಿನ ಸಾಹಿತ್ಯಿಕ ಮತ್ತು ಸಾಂಸ್ಕøತಿಕ ಸಂಘ, ರಾಷ್ಟ್ರೀಯ ಸೇವಾ ಯೋಜನೆ ಘಟಕ ಹಾಗೂ ನೂತನ ತರಗತಿ ಕೊಠಡಿ ಹಾಗೂ ಶೌಚಾಲಯಗಳ ಉದ್ಘಾಟನೆ ಮತ್ತು ಪ್ರತಿಭಾ ಪುರಸ್ಕಾರ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.ಪ್ರತಿಯೊಬ್ಬರಿಗೂ ಜೀವನದಲ್ಲಿ ಶಾಲೆಗಳೇ ಬದುಕಿನ ಭದ್ರ ಬುನಾದಿಯಾಗಿದ್ದು, ಮನುಷ್ಯ ಜೀವನದಲ್ಲಿ ಎಷ್ಟೇ ಎತ್ತರಕ್ಕೆ ಬೆಳೆದಿದ್ದರೂ ಅವರ ಜೀವನ ರೂಪಿಸುವುದು ಮಾತ್ರ ಶಾಲೆ ಮತ್ತು ಕಾಲೇಜುಗಳಾಗಿವೆ. ಮಕ್ಕಳು ಪಾಠದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸಬೇಕು. ಇದರಿಂದ ಮಕ್ಕಳಲ್ಲಿ ಧೈರ್ಯ ಮತ್ತು ಮಾತನಾಡುವ ಕಲೆ ಕರಗತವಾಗುತ್ತದೆ. ವಿಜ್ಞಾನ ವಿಷಯದಲ್ಲಿ ಹೆಚ್ಚಿಸುವ ಅಸಕ್ತಿ ಬೆಳಸಿಕೊಳ್ಳಬೇಕು ಎಂದು ಸಲಹೆ ನೀಡಿದರು. ಕಾಲೇಜು ಸಭಾ ಭವನ ಅನುದಾನದ ಕೊರತೆಯಿಂದ ಅರ್ಧಕ್ಕೆ ನಿಂತಿದ್ದು, ಸಂಸದರ ಹಾಗೂ ಶಾಸಕರ ನುದಾನ ನೀಡಿ ನಮ್ಮ ಅವಧಿಯಲ್ಲಿಯೇ ಸಭಾ ಭವನ ಪೂರ್ಣಗಿಳಿಸಲಾಗುವುದು ಎಂದು ಭರವಸೆ ನೀಡಿದರು. ಕಾಲೇಜಿನ ಕಾರ್ಯದರ್ಶಿ ಎಂ.ಎಂ.ಜೆ.ಹರ್ಷವರ್ಧನ ಮಾತನಾಡಿ, ಅಧಕ್ಕೆ ನಿಂತ್ತಿರುವ ಸಭಾ ಭವನ ಕಾಮಗಾರಿ ಪೂರ್ಣಗೊಳಿಸಲು ಶಾಸಕರು 20 ಲಕ್ಷರೂ ಅನುದಾನ ನೀಡುವಂತೆ ಶಾಸಕರಲ್ಲಿ ಮನವಿ ಮಾಡಿದರು. ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಡಾ.ಹೆಚ್.ಕೆ.ಶೇಖರಪ್ಪ ಮಾತನಾಡಿ, ವಿದ್ಯಾರ್ಥಿಗಳು ಪ್ರಮುಖವಾಗಿ ಸಮಯ ಪ್ರಜ್ಞೆ ಬೆಳಸಿಕೊಳ್ಳಬೇಕು. ಶಿಸ್ತು ಕಲಿಯುವುದರಿಂದ ಜೀವನದಲ್ಲಿ ಉನ್ನತ ಸ್ಥಾನಕ್ಕೆ ಏರಬಹುದು. ಅಧುನಿಕ ಶಿಕ್ಷಣ ವ್ಯವಸ್ಥೆಗೆ ಒಗ್ಗಿಕೊಂಡು ಉನ್ನತ ಸ್ಥಾನ ಪಡೆಯುವ ಮೂಲಕ ಕಾಲೇಜಿಗೆ ಕೀರ್ತಿ ತರಬೇಕು ಎಂದು ಹೇಳಿದರು. ಜಾನಪದ ವಿದ್ವಾಂಸ ಯುಗಧರ್ಮದ ರಾಮಣ್ಣ ಉಪನ್ಯಾಸ ನೀಡಿದರು. ಪುರಸಭೆ ಅಧ್ಯಕ್ಷ ಹೆಚ್.ಕೆ.ಹಾಲೇಶ್, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಎಂ.ಪಿ.ನಾಯ್ಕ, ಬಾಗಳಿ ಕೋಟ್ರಪ್ಪ, ಪ್ರಾಚಾರ್ಯ ಕೃಷ್ಣಸಿಂಗ್, ಉಪನ್ಯಾಸಕರಾದ ಎಚ್.ಮಲ್ಲಿಕಾರ್ಜುನ್, ದ್ವಾರಕೇಶ್, ಹೆಚ್.ಬಿ.ಸೋಮರೆಡ್ಡಿ, ತೌಸಿಫ್ ಅಹ್ಮದ್ ಕಲ್ಮನಿ ಇತರರು ಉಪಸ್ಥಿತರಿದ್ದರು.

Leave a Comment