ವಿದ್ಯಾರ್ಥಿಗಳಿಗೆ ಉಚಿತ ಸೈಕಲ್ ವಿತರಣೆ

ಹನೂರು: ಸೆ.6- ಪ್ರತಿಯೊಬ್ಬ ವಿದ್ಯಾರ್ಥಿಗಳು ಶಾಲೆಗೆ ತಪ್ಪದೇ ಹಾಜರಾಗುವ ನಿಟ್ಟಿನಲ್ಲಿ ಸರ್ಕಾರಗಳು ಉಚಿತವಾಗಿ ಮಧ್ಯಾಹ್ನದ ಬಿಸಿಯೂಟ, ಕ್ಷೀರಭಾಗ್ಯ, ಉಚಿತ ಸೈಕಲ್ ವಿತರಣೆ ಮುಂತಾದ ಕಾರ್ಯಕ್ರಮಗಳನ್ನು ಜಾರಿಗೆ ತಂದಿದೆ ಎಂದು ಜಿ.ಪಂ.ಸದಸ್ಯೆ ಮರುಗದಮಣಿ ತಿಳಿಸಿದರು.
ಹನೂರು ಶೈಕ್ಷಣಿಕ ವಲಯ ವ್ಯಾಪ್ತಿಯ ಹುತ್ತೂರು ಉನ್ನತೀಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 8 ನೇ ತರಗತಿ ವಿದ್ಯಾರ್ಥಿಗಳಿಗೆ ಉಚಿತ ಸೈಕಲ್ ವಿತರಣೆಯನ್ನು ಮಾಡಿ ನಂತರ ಮಾತನಾಡಿಸಿದರು.
ಸರ್ಕಾರಗಳು ವಿದ್ಯಾರ್ಥಿಗಳಿಗಾಗಿ ನೀಡುವ ಸೌಲಭ್ಯಗಳನ್ನು ಸಮರ್ಪಕವಾಗಿ ಬಳಸಿಕೊಂಡು ಶಿಕ್ಷಣವನ್ನು ಪಡೆಯುವ ಮೂಲಕ ವಿದ್ಯಾರ್ಥಿಗಳು ವಿದ್ಯಾವಂತರಾಗಬೇಕು. ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಶಿಕ್ಷಕರು ಕೂಡ ಹೆಚ್ಚಿನ ರೀತಿಯಲ್ಲಿ ಶ್ರಮಿಸಬೇಕೆಂದು ಸಲಹೆ ನೀಡಿದರು.
ಈ ಸಂದರ್ಭದಲ್ಲಿ ತಾ.ಪಂ.ಸದಸ್ಯ ಶಿವಮ್ಮ, ಗ್ರಾ.ಪಂ.ಅಧ್ಯಕ್ಷ ಬಸವಣ್ಣ, ಮುಖ್ಯ ಶಿಕ್ಷಕ ನಂಜುಂಡಸ್ವಾಮಿ ಹಾಗೂ ಶಾಲಾ ಶಿಕ್ಷಕ ವೃಂದ, ಮುಖಂಡ ಶಿವಪ್ಪ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Leave a Comment