ವಿದ್ಯಾರ್ಥಿನಿ ನೇಣಿಗೆ ಶರಣು

ಮೈಸೂರು.ಜ.12-ಖಾಸಗಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಯೋರ್ವರು ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಕಾವೇರಿ ನಗರದಲ್ಲಿ ನಡೆದಿದೆ.
ಮೃತರನ್ನು ಯಾಸ್ಮಿನ್ ತಾಜ್(19)ಎಂದು ಗುರುತಿಸಲಾಗಿದ್ದು, ನಿನ್ನೆ ರಾತ್ರಿ ಊಟ ಮಾಡಿ ರೂಮಿಗೆ ತೆರಳಿದವಳು ಇಂದು ಬೆಳಿಗ್ಗೆ 7.30 ಕಳೆದರೂ ಹೊರಗೆ ಬಾರದೇ ಇರುವುದರಿಂದ ರೂಮಿಗೆ ಹೋಗಿ ನೋಡಲಾಗಿ ಫ್ಯಾನಿಗೆ ನೇಣು ಬಿಗಿದು ಕೊಂಡಿರುವುದು ಕಂಡು ಬಂತು. ಶರೀರ ಬಿಸಿಯಾಗಿಯೇ ಇದ್ದ ಕಾರಣ ತಕ್ಷಣ ಖಾಸಗಿ ಆಸ್ಪತ್ರೆಗೆ ಕರೆತರಲಾಯಿತಾದರೂ ಮಾರ್ಗಮಧ್ಯೆ ಕೊನೆಯುಸಿರೆಳೆದಿದ್ದಾರೆ ಎನ್ನಲಾಗಿದೆ. ಸ್ಥಳಕ್ಕೆ ಎನ್.ಆರ್.ಮೊಹಲ್ಲಾ ಪೊಲೀಸ್ ಠಾಣೆಯ ಇನ್ಸಪೆಕ್ಟರ್ ಬಸವರಾಜು ಮತ್ತು ಸಿಬ್ಬಂದಿಗಳು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಎನ್ ಆರ್.ಮೊಹಲ್ಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Comment