ವಿದ್ಯಾರ್ಥಿ ಆತ್ಮಹತ್ಯೆ

ತುಮಕೂರು, ಆ. ೧೨- ಪ್ಯಾರಾ ಮೆಡಿಕೆಲ್ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಉಪ್ಪಾರಹಳ್ಳಿಯಲ್ಲಿ ನಡೆದಿದೆ.

ಇಲ್ಲಿನ ಉಪ್ಪಾರಹಳ್ಳಿ ವಾಸಿ ಮಂಜು ಸಾಗರ್ (20) ಎಂಬಾತನೇ ಆತ್ಮಹತ್ಯೆ ಶರಣಾಗಿರುವ ದುರ್ದೈವಿ. ಈತ ನಗರದ ಎಸ್ಎಸ್ಐಟಿಯ ಪ್ಯಾರಾ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿಯಾಗಿದ್ದು,  ಮನೆಯಲ್ಲಿ ಯಾರೂ ಇಲ್ಲದಿರುವಾಗ ನೇಣಿಗೆ ಶರಣಾಗಿದ್ದಾನೆ. ಈ ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

ಈ ಸಂಬಂಧ ಜಯನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಜರುಗಿಸುತ್ತಿದ್ದಾರೆ.

Leave a Comment