ವಿದ್ಯುತ್ ತಂತಿ ತಗುಲಿ ಬಾಲಕ ಸಾವು

ಬೆಂಗಳೂರು, ಆ. ೩೦- ವಿದ್ಯುತ್ ತಂತಿ ತಗುಲಿ ತೀವ್ರ ಅಸ್ವಸ್ಥನಾಗಿದ್ದ ನೆಲಮಂಗಲದ ಜ್ಯೋತಿ ನಗರದ ಬಾಲಕ ತೇಜಸ್ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ.
ಕಳೆದ ಅಕ್ಟೋಬರ್ 25 ರಂದು ಜ್ಯೋತಿ ನಗರದ ಮನೆಯ ಮೇಲೆ ಆಟವಾಡುತ್ತಿದ್ದ ವೇಳೆ ಕಬ್ಬಿಣದ ಸರಳು ವಿದ್ಯುತ್ ತಂತಿಗೆ ತಗುಲಿ ಅದರಿಂದ ವಿದ್ಯುತ್ ಪ್ರವಹಿಸಿ ಅಸ್ವಸ್ಥನಾಗಿದ್ದ ತೇಜಸ್‌ನನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಅಲ್ಲಿಂದ ಇಲ್ಲಿವರೆಗೆ ಸಾವು – ಬದುಕಿನ ನಡುವೆ ಹೋರಾಟ ನಡೆಸಿದ ತೇಜಸ್ ಇಂದು ಮುಂಜಾನೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ.
ನೆಲಮಂಗಲ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

Leave a Comment