ವಿಧಾನ ಪರಿಷತ್ತಿನ ಶಿಕ್ಷಕರ ಕ್ಷೇತ್ರಕ್ಕೆ ಶಿಕ್ಷಕರೇ ಆಯ್ಕೆಯಾಗ ಬೇಕು

ಹೊನ್ನಾಳಿ,ಜ,13 ; ವಿಧಾನ ಪರಿಷತ್ತಿನ ಶಿಕ್ಷಕರ ಕ್ಷೇತ್ರಕ್ಕೆ ಶಿಕ್ಷಕರೇ ಆಯ್ಕೆಯಾದಾಗ ಮಾತ್ರ ಶಿಕ್ಷಕ ಸಮುದಾಯದ ಏಳ್ಗೆ ಸಾಧ್ಯ ಎಂದು ವಿಧಾನ ಪರಿಷತ್ ನೈಋತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಕೆ.ಕೆ. ಮಂಜುನಾಥ್ ಹೇಳಿದರು.ಇಲ್ಲಿನ ಸರಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಪ್ರೌಢಶಾಲಾ ಮುಖ್ಯ ಹಾಗೂ ಸಹ ಶಿಕ್ಷಕರ ಸಂಘಗಳ ಸಂಯುಕ್ತಾಶ್ರಯದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಸಭೆಯಲ್ಲಿ ಅವರು ಮಾತನಾಡಿದರು.ಆರು ವರ್ಷಗಳ ಹಿಂದೆ ನಾನು ಸರಕಾರಿ ಪ್ರೌಢಶಾಲೆಯ ಶಿಕ್ಷಕನಾಗಿ ಸೇವೆ ಸಲ್ಲಿಸುತ್ತಿದ್ದೆ, ಶಿಕ್ಷಕರ ಸಮಸ್ಯೆಗಳ ಬಗ್ಗೆ ಆಳವಾದ ಅರಿವು ನನಗೆ ಇದೆ. ಇದನ್ನು ಮನಗಂಡು ಅಂದು ರಾಜೀನಾಮೆ ನೀಡಿ ನೈಋತ್ಯ ಶಿಕ್ಷಕರ ಕ್ಷೇತ್ರಕ್ಕೆ ಸ್ಪರ್ಧೆ ಮಾಡಿ ಕೆಲವೇ ಮತಗಳ ಅಂತರದಿಂದ ಸೋಲಬೇಕಾಯಿತು ಎಂದು ಹೇಳಿದರು.ನೈಋತ್ಯ ಶಿಕ್ಷಕರ ಕ್ಷೇತ್ರಕ್ಕೆ ಇನ್ನು 6 ತಿಂಗಳು ಸಮಯಾವಕಾಶವಿದ್ದು, ನಾನು ಈಗಾಗಲೇ ಕೊಡಗು, ಚಿಕ್ಕಮಗಳೂರು, ಉಡುಪಿ, ಶಿವಮೊಗ್ಗ, ದಕ್ಷಿಣ ಕನ್ನಡ ಜಿಲ್ಲೆಗಳು ಹಾಗೂ ದಾವಣಗೆರೆ ಜಿಲ್ಲೆಯ ಹೊನ್ನಾಳಿ ಮತ್ತು ಚನ್ನಗಿರಿ ತಾಲೂಕುಗಳಲ್ಲಿ ಎರಡು ಬಾರಿ ಪ್ರವಾಸ ಮಾಡಿ ಶಿಕ್ಷಕರನ್ನು ಸಂಪರ್ಕಿಸಿದ್ದೇನೆ. ಈ ಬಾರಿ ನನ್ನ ಗೆಲುವು ನಿಶ್ಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.ಮುಂಬರುವ ಜೂನ್ ತಿಂಗಳಲ್ಲಿ ವಿಧಾನ ಪರಿಷತ್ ನೈಋತ್ಯ ಶಿಕ್ಷಕರ ಕ್ಷೇತ್ರಕ್ಕೆ ಚುನಾವಣೆ ನಡೆಯುತ್ತಿದ್ದು, ನಾನುಅಭ್ಯರ್ಥಿಯಾಗಿದ್ದೇನೆ. ನನ್ನ ಗೆಲುವಿಗೆ ಎಲ್ಲಾ ಶಿಕ್ಷಕರು ಸಹಕಾರ ನೀಡಬೇಕು ಎಂದು ಕೋರಿದರು.ಪ್ರೌಢಶಾಲಾಸಹಶಿಕ್ಷಕರಸಂಘದತಾಲೂಕುಘಟಕದ ಅಧ್ಯಕ್ಷ ಎನ್.ಎಚ್. ರವಿಗೌಡರ್ ಮಾತನಾಡಿ, ಶಿಕ್ಷಕರಿಂದ ಆಯ್ಕಯಾಗಿ ವಿಧಾನ ಪರಿಷತ್ ಪ್ರವೇಶಿಸಿದ ವಿವಿಧ ಪಕ್ಷಗಳ ಶಾಸಕರು ಶಿಕ್ಷಕರ ಅಭ್ಯುದಯಕ್ಕೆ ದುಡಿಯದೆ ತಮ್ಮ ಏಳ್ಗೆಯನ್ನು ಮಾತ್ರ ನೋಡಿಕೊಂಡರು ಎಂದು ಟೀಕಿಸಿದರು. ಆರು ವರ್ಷಗಳ ಹಿಂದೆ ಗೆಲುವು ಸಾಧಿಸಿದ ಶಾಸಕರು ಕನಿಷ್ಠ ಒಂದು ಬಾರಿಯಾದರೂ ಶಿಕ್ಷಕರನ್ನು ಭೇಟಿ ಮಾಡುವ ಸೌಜನ್ಯ ತೋರಲಿಲ್ಲ. ಈ ಬಾರಿ ಕೆ.ಕೆ. ಮಂಜುನಾಥ್ ಅವರ ಗೆಲುವಿಗೆ ಶ್ರಮಿಸೋಣ ಎಂದು ಹೇಳಿದರು.
ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಂಘದ ಕಾರ್ಯದರ್ಶಿ ತಿಪ್ಪೇಶಪ್ಪ, ಸಹ ಶಿಕ್ಷಕರ ಸಂಘದ ಕಾರ್ಯದರ್ಶಿ ಕೃಷ್ಣನಾಯ್ಕ ಹಾಗೂ ಇತರ ಶಿಕ್ಷಕರು ಮಾತನಾಡಿದರು.

 

Leave a Comment