ವಿಮಾನ ಸ್ಕಿಡ್ ಪ್ರಕರಣ ಉನ್ನತ ತನಿಖೆಗೆ ಆಗ್ರಹ

ಮಂಗಳೂರು, ಜು.೧- ದುಬೈನಿಂದ ಬಂದ ೧೮೩ ಪ್ರಯಾಣಿಕರಿದಗ್ದ ವಿಮಾನ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸ್ಕಿಡ್ ಆಗಿರುವ ಪ್ರಕರಣವನ್ನು ಉನ್ನತ ತನಿಖೆಗೆ ವಹಿಸುವಂತೆ ನಗರಾಭಿವೃದ್ಧಿ ಹಾಗೂ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ ಖಾದರ್ ಅವರು ಆಗ್ರಹಿಸಿದ್ದಾರೆ. ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಅವರು ರನ್ ವೇಯಿಂದ ಜಾರಿದ ಘಟನೆಯನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ನಡೆಸಬೇಕು. ಈ ಸಂಬಂಧ ನಾಗರಿಕ ವಿಮಾನಯಾನ ಮಹಾ ನಿರ್ದೇಶಕರೊಂದಿಗೆ ಹಾಗೂ ಸಚಿವಾಲಯದೊಂದಿಗೆ ಮಾತನಾಡಿರುವ ಸಚಿವರು, ಈ ಘಟನೆ ಪೈಲಟ್ ಅಥವಾ ವಿಮಾನದ ದೋಷದಿಂದ ಏರ್‌ಪೋಟ್೯ ವ್ಯವಸ್ಥೆಯಲ್ಲಿ ಏನಾದರೂ ಕೊರತೆಯುಂಟಾಗಿದೆಯೇ ಎಂಬುದರ ಬಗ್ಗೆ ಸಮಗ್ರ ವಿಚಾರಣೆ ನಡೆಸಬೇಕು. ಪ್ರಯಾಣಿಕರ ಸುರಕ್ಷಿತ ಪ್ರಯಾಣಕ್ಕೆ ಉತ್ಕೃಷ್ಟ ಕಾಳಜಿ ವಹಿಸಬೇಕು. ಕೂಡಲೇ ಈ ಬಗ್ಗೆ ಸ್ಪಂದಿಸಲು ಸಚಿವ ಖಾದರ್ ಆಗ್ರಹಿಸಿದ್ದಾರೆ.
ನಿಯಂತ್ರಣ ಕಳೆದುಕೊಂಡ ಘಟನೆ:
ದುಬೈನಿಂದ ಮಂಗಳೂರಿಗೆ ಆಗಮಿಸಿದ ಏರ್ ಇಂಡಿಯಾ ವಿಮಾನ ಲ್ಯಾಂಡಿಂಗ್ ಸಮಯದಲ್ಲಿ ಸ್ಕಿಡ್ ಆಗಿರುವ ಘಟನೆ ನಿನ್ನೆ ಸಂಜೆ ೫.೪೦ಕ್ಕೆ ನಡೆದಿದ್ದು ಇದು ವಿಮಾನ ನಿಯಂತ್ರಣ ಕಳೆದುಕೊಂಡು ಸಂಭವಿಸಿದ ಘಟನೆ ಎಂದು ಮಂಗಳೂರು ವಿಮಾನ ನಿಲ್ದಾಣ ಪ್ರಾಧಿಕಾರ ಸ್ಪಷ್ಟೀಕರಣ ನೀಡಿದೆ. ದುಬೈನಿಂದ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿದ ವಿಮಾನ ಟರ್ಮಿನಲ್‌ನಲ್ಲಿ ಟ್ಯಾಕ್ಸಿ ವೇನಲ್ಲಿ ಮುನ್ನುಗ್ಗಿದೆ ಎಂದು ತಿಳಿದುಬಂದಿದೆ. ಘಟನೆಯಲ್ಲಿ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ಬಳಿಕ ವಿಮಾನವನ್ನು ಸುರಕ್ಷಿತ ಸ್ಥಳಕ್ಕೆ ತರಲಾಗಿದೆ.

Leave a Comment