ವಿಲ್ಸನ್‌ಗಾರ್ಡನ್‌ನಲ್ಲಿ ಉಕ್ಕಿನ ಸೇತುವೆಗೆ ವಿರೋಧ

ಬೆಂಗಳೂರು, ಜೂ ೧೨- ಬಿಟಿಎಸ್ ರಸ್ತೆಯಲ್ಲಿ ಸ್ಟೀಲ್ ಬ್ರಿಡ್ಜ್ ಕಾಮಗಾರಿ ಕೈಗೆತ್ತಿಕೊಳ್ಳಬಾರದು ಎಂದು ಆಗ್ರಹ ಪಡಿಸಿ ಸ್ಥಳೀಯ ನಿವಾಸಿಗಳು ಪ್ರತಿಭಟನೆ ನಡೆಸಿದ್ದಾರೆ. ೪೦ ಅಡಿ ಅಗಲವಿರುವ ರಸ್ತೆಯಲ್ಲಿ ಸ್ಟೀಲ್ ಬ್ರಿಡ್ಜ್ ಕಾಮಗಾರಿ ನಡೆಸಿದರೆ ಮನೆಗಳು ಅಲ್ಲದೇ ಮರಗಳನ್ನು ತೆರವುಗೊಳಿಸುವ ಅಪಾಯವಿದೆ ಇದರಿಂದ ಸ್ಥಳೀಯ ನಿವಾಸಿಗಳಿಗೆ ಹೆಚ್ಚು ತೊಂದರೆಯಾಗಲಿದೆ ಎಂದು ಆಗ್ರಹಪಡಿಸಿ ಸುಮಾರು ೨೦೦ಕ್ಕೂ ಹೆಚ್ಚು ನಿವಾಸಿಗಳು ಪ್ರತಿಭಟನೆ ನಡೆಸಿದರು.
ಬಿಟಿಎಸ್ ರಸ್ತೆಯಲ್ಲಿ ಸ್ಟೀಲ್ ಬ್ರಿಡ್ಜ್ ಕಾಮಗಾರಿಯನ್ನು ಕೈಗೆತ್ತಿಕೊಳ್ಳುವ ಬದಲು ಶಾಂತಿ ನಗರ ಬಸ್ ನಿಲ್ದಾಣದಿಂದ ಲಾಲ್ ಬಾಗ್ ರಸ್ತೆವರೆಗೆ ಬದಲಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಪಡಿಸಿದರು.
ಲಾಲ್ ಬಾಗ್ ರಸ್ತೆಯಲ್ಲಿ ಸುಮಾರು ೩೦೦ ಅಡಿಗಳಷ್ಟು ರಸ್ತೆ ಇದೆ. ಇಲ್ಲಿ ಸ್ಟೀಲ್ ಬ್ರಿಡ್ಜ್ ಕಾಮಗಾರಿ ನಡೆಸಿದರೆ ಯಾರಿಗೂ ತೊಂದರೆ ಆಗುವುದಿಲ್ಲ. ಆದರೆ ೪೦ ಅಡಿಗಳಷ್ಟು ಇರುವ ಬಿಟಿಎಸ್ ರಸ್ತೆಯಲ್ಲಿ ಸ್ಟೀಲ್ ಬ್ರಿಡ್ಜ್ ಕಾಮಗಾರಿ ಕೈಗೆತ್ತಿಕೊಂಡಿರುವ ಅವೈಜ್ಞಾನಿಕ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದರು.ಈಗಾಗಲೇ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರಿಗೆ ಮನವಿ ಪತ್ರವನ್ನು ಸಲ್ಲಿಸಲಾಗಿದೆ ಎಂದು ಸ್ಥಳೀಯ ನಿವಾಸಿಗಳು ತಿಳಿಸಿದ್ದಾರೆ.
ಪ್ರತಿಭಟನೆಯಲ್ಲಿ ಸ್ಥಳೀಯ ನಿವಾಸಿ ರಾಮಣ್ಣ ಸೇರಿದಂತೆ ನೂರಾರು ಪ್ರತಿಭಟನಾಕಾರರು ಭಾಗವಹಿಸಿದ್ದರು.

Leave a Comment