ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿ ಪೂಜೆ

ಹನೂರು, ಸೆ.11- ಕಳೆದ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡದ ಅಭಿವೃದ್ಧಿಗೆ ಹೆಚ್ಚಿನ ಅನುದಾನವನ್ನು ನೀಡಿತ್ತು ಎಂದು ಸಂಸದ ಆರ್.ಧ್ರುವನಾರಾಯಣ್ ತಿಳಿಸಿದರು.
ಹನೂರು ವಿಧಾನಸಭೆ ಕ್ಷೇತ್ರ ವ್ಯಾಪ್ತಿಯಲ್ಲಿ ಪ್ರಧಾನ ಮಂತ್ರಿ ಗ್ರಾಮ ವಿಕಾಸ ಯೋಜನೆಗೆ ಆಯ್ಕೆಯಾದ ಗ್ರಾಮಗಳಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿ ಪೂಜೆಯನ್ನು ನೆರವೇರಿಸಿದ ಅವರು ದಿನ್ನಳ್ಳಿ ಗ್ರಾಮದಲ್ಲಿ ಮಾತನಾಡಿದರು.
ಬಡವರು ದೀನ ದಲಿತರ ಪರವಾಗಿ ಮನಮೋಹನ್ ಸಿಂಗ್ ನೇತೃತ್ವದ ಹಿಂದಿನ ಕೇಂದ್ರ ಸರ್ಕಾರ ಆಹಾರ ಭದ್ರತಾ ಕಾಯ್ದೆ, ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ, ಕಡ್ಡಾಯ ಶಿಕ್ಷಣ ಮುಂತಾದ ಜನಹಿತ ಕಾರ್ಯಕ್ರಮಗಳನ್ನು ನೀಡಿದೆ ಎಂದು ಹೇಳಿದರು.
ಗುಣಮಟ್ಟದ ಕಾಮಗಾರಿಗೆ ಒತ್ತು ನೀಡಿ
ರಾಜ್ಯದ ಎರಡನೇ ಅತಿ ಉದ್ದದ ರಸ್ತೆಯಾದ ದಿನ್ನಳ್ಳಿ ರಸ್ತೆ ಕಾಮಗಾರಿ ಬಗ್ಗೆ ಪರಿಶೀಲಿಸಿದ ಶಾಸಕ ಆರ್.ನರೇಂದ್ರ ಗುಣಮಟ್ಟದ ಕಾಮಗಾರಿಗೆ ಒತ್ತನ್ನು ನೀಡಿ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಜಿ.ಪಂ.ಅಧ್ಯಕ್ಷೆ ಶಿವಮ್ಮ ಕೃಷ್ಣ, ಸದಸ್ಯ ಬಸವರಾಜು, ತಾ.ಪಂ. ಅಧ್ಯಕ್ಷ ಆರ್.ರಾಜು, ಸದಸ್ಯ ರಾಜೇಂದ್ರ, ತಾ.ಪಂ.ಮಾಜಿ ಅಧ್ಯಕ್ಷ ಮುರುಳಿ ಇನ್ನಿತರರು ಉಪಸ್ಥಿತರಿದ್ದರು.

Leave a Comment