ವಿವಿ ಕಲಾ ಕಾಲೇಜಿಗೆ ಸಮಗ್ರ ಪ್ರಶಸ್ತಿ

ತುಮಕೂರು, ಅ. ೧೨- ತುಮಕೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ ಕಾಲೇಜು ಅಥ್ಲೆಟಿಕ್ ಕ್ರೀಡಾಕೂಟವನ್ನು ನಗರದ ಮಹಾತ್ಮಗಾಂಧೀಜಿ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿತ್ತು.

ಒಟ್ಟು 23 ತಂಡಗಳು ಪಾಲ್ಗೊಂಡಿದ್ದ ಈ ಕ್ರೀಡಾಕೂಟದ ಪುರುಷರ ವಿಭಾಗದಲ್ಲಿ ವಿಶ್ವವಿದ್ಯಾನಿಲಯ ಕಲಾ ಕಾಲೇಜು ತಂಡ ಸಮಗ್ರ ಪ್ರಶಸ್ತಿಯನ್ನು ಬಾಚಿಕೊಂಡು ಕಾಲೇಜಿಗೆ ಹಾಗೂ ವಿಶ್ವವಿದ್ಯಾನಿಲಯಕ್ಕೆ ಕೀರ್ತಿ ತಂದಿದ್ದಾರೆ. ಮಹಿಳಾ ವಿಭಾಗದಲ್ಲಿ ವಿ.ವಿ. ಕಲಾ ಕಾಲೇಜಿನ ತೃತೀಯ ಬಿ.ಕಾಂ ವಿದ್ಯಾರ್ಥಿನಿ ಅರ್ಚನಾ ಜಿ., ವೈಯಕ್ತಿ ಚಾಂಪಿಯನ್ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಸಮಗ್ರ ಪ್ರಶಸ್ತಿ ಪಡೆದಿರುವುದು ಸಂತಸ ತಂದಿದೆ ಎಂದು ಪ್ರಾಂಶುಪಾಲ ಬಿ ಕರಿಯಣ್ಣ ಹೇಳಿದರು.

ಇದೇ ಸಂದರ್ಭದಲ್ಲಿ ತರಬೇತುದಾರ ಸುದೀಪ್‌ಕುಮಾರ್ ರವರನ್ನು ಅಭಿನಂದಿಸಲಾಯಿತು.

ಕಾರ್ಯಕ್ರಮದಲ್ಲಿ ವಿಶ್ವವಿದ್ಯಾನಿಲಯದ ಪ್ರಭಾರ ಕುಲಪತಿ ಪ್ರೊ.ಜಯಶೀಲ, ಹಣಕಾಸು ಅಧಿಕಾರಿ ಪ್ರೊ. ಪರಮಶಿವಯ್ಯ ವಿದ್ಯಾರ್ಥಿಗಳನ್ನು ಅಭಿನಂದಿಸಿದರು.

Leave a Comment