ವಿವೇಕಾನಂದ ಜಯಂತಿ ವಿದ್ಯಾರ್ಥಿಗಳ ಪಥ ಸಂಚಲನ

(ನಮ್ಮ ಪ್ರತಿನಿಧಿಯಿಂದ)
ಬೆಂಗಳೂರು, ಜ.೧೨-ರಾಷ್ಟ್ರೀಯ ಯುವ ದಿನಾಚರಣೆ ಮತ್ತು ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆ ಅಂಗವಾಗಿ ನಗರದಲ್ಲಿಂದು ಬಿಬಿಎಂಪಿ ಶಾಲಾ- ಕಾಲೇಜುಗಳು ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು ಪಥ ಸಂಚಲನ ನಡೆಸುವ ಮೂಲಕ ವಿವೇಕಾನಂದರ ಆದರ್ಶವನ್ನು ಸಾರ್ವಜನಿಕರಲ್ಲಿ ಅರಿವು ಮೂಡಿಸಿದ್ದಾರೆ.
ಇಂದು ಬೆಳಿಗ್ಗೆ ಹಲಸೂರು ಗೇಟ್ ಪೊಲೀಸ್ ಠಾಣೆ ಬಳಿ ಸಮಾವೇಶಗೊಂಡ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು ಸ್ವಾಮಿ ವಿವೇಕಾನಂದರ ಭಾವಚಿತ್ರದೊಂದಿಗೆ ಪಂಥ ಸಂಚಲನ ನಡೆಸಿದರು.
ಮೈಸೂರು ಬ್ಯಾಂಕ್ ವೃತ್ತ, ಕೆ.ಆರ್.ವೃತ್ತ ಮೂಲಕ ಬಿಬಿಎಂಪಿ ಕೇಂದ್ರ ಕಛೇರಿವರೆವಿಗೂ ಮೆರವಣಿಗೆ ನಡೆಸಿದರು. ಮೇಯರ್ ಗಂಗಾಂಬಿಕೆ ಮಲ್ಲಿಕಾರ್ಜುನ ಅವರು ಸ್ವಾಮಿ ವಿವೇಕಾನಂದ ಜನ್ಮ ದಿನಾಚರಣೆಯ ಅಂಗವಾಗಿ ಆಯೋಜಿಸಿದ್ದ ಪಥ ಸಂಚಲನಕ್ಕೆ ಚಾಲನೆ ನೀಡಿ ಮಾತನಾಡಿ, ಸ್ವಾಮಿ ವಿವೇಕಾನಂದರ ತತ್ವ ಮತ್ತು ಆದರ್ಶಗಳನ್ನು ಪ್ರತಿ ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವಂತೆ ಕರೆ ನೀಡಿದರು.
ಇಂದಿನ ಮಕ್ಕಳೇ ಭವಿಷ್ಯದ ಆಶಾಕಿರಣ, ವಿವೇಕಾನಂದ ಅವರ ಮಾರ್ಗದರ್ಶನದಲ್ಲಿ ಸಾಗುವ ಮೂಲಕ  ಸಂಸ್ಕಾರಯುತ ರಾಷ್ಟ್ರವನ್ನಾಗಿ ಮಾಡಲು ಕಂಕಣಬದ್ಧ ರಾಗುವಂತೆ ಹೇಳಿದರು.
ಪಥ ಸಂಚಲನದಲ್ಲಿ ಬಿಬಿಎಂಪಿ ಅಪಾರ ಆಯುಕ್ತ ರಂದೀಪ್, ಕೌನ್ಸಿಲ್ ಕಾರ್ಯದರ್ಶಿ ಪಲ್ಲವಿ, ಸ್ಕೌಟ್ಸ್ ಮತ್ತು ಗೈಡ್ಸ್‌ನ ಕಲ್ಲಯ್ಯ ಹಾಗೂ ಬಿಬಿಎಂಪಿ ಶಾಲಾ- ಕಾಲೇಜುಗಳ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

Leave a Comment