ವಿಶ್ರಾಂತಿ ಪಡೆಯಲು ಸಿಎಂಗೆ ವೈದ್ಯರ ಸಲಹೆ

ಬೆಂಗಳೂರು, ನ. ೯- ನಾಳೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆಯುವ ಟಿಪ್ಪು ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸುವುದರಿಂದ ಉಂಟಾಗುವ ಮುಜುಗರವನ್ನು ತಪ್ಪಿಸಿಕೊಳ್ಳಲು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ವಿಶ್ರಾಂತಿಯ ಮೊರೆ ಹೋಗಿದ್ದಾರೆ.

ಅಧಿಕಾರಕ್ಕೆ ಬಂದಲ್ಲಿ ಟಿಪ್ಪು ಜಯಂತಿ ಆಚರಿಸುವುದಿಲ್ಲ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಈ ಹಿಂದೆ ಹೇಳಿಕೆ ನೀಡಿದ್ದರು. ಹಾಗಾಗಿ ಟಿಪ್ಪು ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸದೇ ದೂರವೇ ಉಳಿಯಲು ಅವರು ನಿರ್ಧರಿಸಿದ್ದಾರೆ.

ಕೊಡಗು ಜಿಲ್ಲೆಯಲ್ಲಿ ಒಕ್ಕಲಿಗ ಸಮುದಾಯದವರೇ ಹೆಚ್ಚು ಇರುವುದರಿಂದ ಅವರ ವಿರೋಧ ಕಟ್ಟಿಕೊಳ್ಳಲು ಸಿದ್ಧರಿಲ್ಲದ ಮುಖ್ಯಮಂತ್ರಿ ಟಿಪ್ಪು ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿಲ್ಲ.

ವೈದ್ಯರ ಸಲಹೆ ಮೇರೆಗೆ ಮುಖ್ಯಮಂತ್ರಿ ಕುಮಾರ ಸ್ವಾಮಿ ಅವರು ತಮ್ಮ ಕುಟುಂಬದ ಸದಸ್ಯರೊಂದಿಗೆ ವಿಶ್ರಾಂತಿ ಪಡೆಯಲು ಮೈಸೂರಿಗೆ ತೆರಳಿದ್ದಾರೆ.

ಪತ್ನಿ ಅನಿತಾ ಕುಮಾರಸ್ವಾಮಿ, ಪುತ್ರ ನಿಖಿಲ್ ಅವರೊಂದಿಗೆ ಮೈಸೂರಿಗೆ ತೆರಳಿರುವ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಮೂರು ದಿನಗಳ ಬಳಿಕ ನವೆಂಬರ್ 11 ರಂದು ಸಂಜೆ ಬೆಂಗಳೂರಿಗೆ ವಾಪಸ್ಸಾಗಲಿದ್ದಾರೆ.

Leave a Comment