ವಿಶ್ವ ಜನಸಂಖ್ಯಾ ದಿನಾಚರಣೆ ಪ್ರಯುಕ್ತ ಜನಜಾಗೃತಿ ಜಾಥಾ

ತುಮಕೂರು, ಜು. ೧೧- ವಿಶ್ವ ಜನಸಂಖ್ಯಾ ದಿನಾಚರಣೆ ಅಂಗವಾಗಿ ಜಿಲ್ಲಾಡಳಿ, ಜಿ.ಪಂ., ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾಸ್ಪತ್ರೆ, ವಿವಿಧ ನರ್ಸಿಂಗ್ ಕಾಲೇಜುಗಳು ಹಾಗೂ ವಿವಿಧ ಸಂಘ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಜಾಥಾಕ್ಕೆ ಜಿ.ಪಂ. ಅಧ್ಯಕ್ಷೆ ಲತಾರವಿಕುಮಾರ್ ಹಾಗೂ ಜಿ.ಪಂ. ಸಿಇಓ ಅನೀಸ್ ಕಣ್ಮಣಿ ಜಾಯ್ ಚಾಲನೆ ನೀಡಿದರು.

ಇಲ್ಲಿನ ಜಿಲ್ಲಾಸ್ಪತ್ರೆ ಆವರಣದಲ್ಲಿಂದು ಹಮ್ಮಿಕೊಂಡಿದ್ದ ವಿಶ್ವ ಜನಸಂಖ್ಯಾ ದಿನಾಚರಣೆಯ ಜಾಥಾಕ್ಕೆ ಚಾಲನೆ ನೀಡಿದ ನಂತರ ಮಾತನಾಡಿದ ಜಿ.ಪಂ. ಸಿಇಓ ಅನೀಸ್ ಕಣ್ಮಣಿ ಜಾಯ್ ಅವರು, ದೇಶದಲ್ಲಿ ಜನಸಂಖ್ಯಾ ನಿಯಂತ್ರಣದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯ ನಿರಂತರವಾಗಿ ನಡೆಯುತ್ತಿದೆ. ಜತೆಗೆ ಕುಟುಂಬ ಯೋಜನೆಯ ಬಗ್ಗೆಯೂ ಜನರಲ್ಲಿ ಅರಿವು ಮೂಡಿಸುವ ಕಾರ್ಯಗಳು ಅತ್ಯಗತ್ಯ ಎಂದರು.

ನಮ್ಮ ದೇಶದಲ್ಲಿ ಜನಸಂಖ್ಯೆ ಅತ್ಯಧಿಕವಾಗಿದ್ದು, ಇದನ್ನು ನಿಯಂತ್ರಿಸುವ ಸಂಬಂಧ ಪ್ರತಿಯೊಬ್ಬರೂ ಜಾಗರೂಕರಾಗುವ ಅಗತ್ಯವಿದೆ ಎಂದರು.

ನಂತರ ಜಾಥಾವು ನಗರದ ಟೌನ್‌ಹಾಲ್ ವೃತ್ತದ ಮುಖೇನ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಗುಬ್ಬಿ ವೀರಣ್ಣ ರಂಗಮಂದಿರ ತಲುಪಿತು.

ಜಾಥಾದಲ್ಲಿ ಡಿಹೆಚ್ಓ ಡಾ. ರಂಗಸ್ವಾಮಿ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ವೀರಭದ್ರಯ್ಯ, ಡಾ. ಕೇಶವ ಸೇರಿದಂತೆ ವಿವಿಧ ನರ್ಸಿಂಗ್ ಕಾಲೇಜುಗಳ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

Leave a Comment