ವಿಶ್ವ ತಂಬಾಕು ವಿರೋಧಿ ದಿನಾಚರಣೆ ತಂಬಾಕು ಸೇವನೆ,ಉಗುಳುವುದು ನಿಷೇಧ: ಡಾ.ಮರಿಯಂಬಿ

ಬಳ್ಳಾರಿ, ಮೇ 31: ವಿಶ್ವ ತಂಬಾಕು ವಿರೋಧಿ ದಿನಾಚರಣೆ ಅಂಗವಾಗಿ‌ ಇಂದು ನಗರದಲ್ಲಿ‌ ಏರ್ಪಡಿಸಿದ್ದ ವಾಹನಗಳ ಧ್ವನಿವರ್ಧಕದ ಮೂಲಕ ಜನಜಾಗೃತಿ ಅಭಿಯಾನಕ್ಕೆ ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಮರಿಯಂಬಿ ಮತ್ತು ಜಿಲ್ಲಾ ಆರೋಗ್ಯ ತರಬೇತಿ ಕೇಂದ್ರದ ಪ್ರಾಂಶುಪಾಲ ಡಾ.ಗುರುರಾಜ‌ ಚವ್ಹಾಣ ಅವರು‌ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ‌ ಕಚೇರಿ ಆವರಣದಲ್ಲಿ ಚಾಲನೆ ನೀಡಿದರು.

ವಾಹನದಲ್ಲಿ ಧ್ವನಿವರ್ದಕದ ಮೂಲಕ ಜನಜಾಗೃತಿ ಅಭಿಯಾನವು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಛೇರಿಯಿಂದ ಹೊರಟು ಸಂಗಂ ವೃತ್ತ, ರಾಘವೇಂದ್ರ ಚಿತ್ರ ಮಂದಿರ ವೃತ್ತ, ಮೀನಾಕ್ಷಿ ವೃತ್ತ, ಜಿಲ್ಲಾಧಿಕಾರಿಗಳ ಕಾರ್ಯಲಯ, ರಾಯಲ್ ವೃತ್ತ, ಬೆಂಗಳೂರು ರಸ್ತೆ, ಬ್ರೂಸ್ ಪೇಟೆ ಪೋಲೀಸ್ ಠಾಣೆ, ಎ.ಪಿ.ಎಂ.ಸಿ ಯಾರ್ಡ್,ಬಾಪೂಜಿನಗರ, ಮಿಲ್ಲರ್ ಪೇಟೆ, ಶ್ರೀ ರಾಂಪುರ ಕಾಲೋನಿ, ಎಮ್.ಜಿ ವೃತ್ತ, ಪಟೇಲ್ ನಗರ, ಎಸ್.ಎನ್.ಪೇಟೆ, ಗಾಂಧಿನಗರ, ದುರ್ಗಮ್ಮ ಗುಡಿ ವೃತ್ತ, ಎಸ್.ಪಿ.ಸರ್ಕಲ್, ಕೋಟೆ, ಕೌಲ್ ಬಜಾರ್, ಬೆಳಗಲ್ ಕ್ರಾಸ್, ರೇಡಿಯೋ ಪಾರ್ಕ್, ನಂದಿ ಸ್ಕೂಲ್ ಹೊಸಪೇಟೆ ರಸ್ತೆ, ಸುಧಾ ಕ್ರಾಸ್, ಓ.ಪಿ.ಡಿ. ಇಂದಿರಾನಗರ, ದೇವಿನಗರ, ಮೋತಿ ವೃತ್ತ, ರಾಯಲ್ ವೃತ್ತ, ಪುನಃ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಛೇರಿಗೆ ಮರಳಿತು.

ಈ ಸಂಧರ್ಭದಲ್ಲಿ ಚಾಲನೆ ನೀಡಿದ ನಂತರ ಮಾತನಾಡಿದ‌ ಮರಿಯಂಬಿ ಅವರು, ಸಮುದಾಯದಲ್ಲಿ ಅನಾದಿಕಾಲದಿಂದಲೂ ಬಳಕೆಯಲ್ಲಿರುವ ತಂಬಾಕಿನ ವಿವಿಧ ಉತ್ಪನ್ನಗಳನ್ನು ಸಾರ್ವಜನಿಕ ಆರೋಗ್ಯದ ಹಿನ್ನಲೆಯಲ್ಲಿ ಹಂತ ಹಂತವಾಗಿ ಬಳಕೆಯನ್ನು ನಿಯಂತ್ರಿಸುವ ಕಾರ್ಯ ಕಾನೂನಾತ್ಮಕ ರೀತಿಯಲ್ಲಿ ಹಾಗೂ ಜಾಗೃತಿ ನೀಡುವ ಮೂಲಕ ಕೈಗೊಳ್ಳಲಾಗುತ್ತಿದೆ. ಇತ್ತೀಚಿಗೆ ಜಾಗತಿಕವಾಗಿ ಕಂಡುಬಂದ ಕರೋನಾ ನಿಯಂತ್ರಣಕ್ಕಾಗಿ ಸಾರ್ವಜನಿಕ ಸ್ಥಳಗಳಲ್ಲಿ ಜಗಿಯುವ ತಂಬಾಕು ಸೇವನೆ ಮತ್ತು ಉಗುಳುವುದನ್ನು ನಿಷೇಧಿಸಲಾಗಿದ್ದು ಇದಕ್ಕಾಗಿ ಸಾರ್ವಜನಿಕರು ಸಂಪೂರ್ಣವಾಗಿ ಸಹಕಾರ ನೀಡುವಂತೆ ಕೋರಿದರು.

ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ‌ಸಲಹೆಗಾರ ದುರುಗೇಶ ಎಸ್.ಮಾಚನೂರು, ಜಿಲ್ಲಾ ಕಾರ್ಯಕ್ರಮ ಸಂಯೋಜಕಿ ಜಬೀನ್ ತಾಜ್ ಜಿಲ್ಲಾ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಈಶ್ವರ ದಾಸಪ್ಪನವರ, ಉಪಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಕೃಷ್ಣ ನಾಯಕ, ಡಾ. ಗುರುಪ್ರಸಾದ್ ಪುರೋಹಿತ್, ಶರತ್ ಬಾಬು ಹಾಗೂ ಜಿಲ್ಲಾ ಸರ್ವೇಕ್ಷಣಾ ಘಟಕ ಸಿಬ್ಬಂದಿಗಳು ಉಪಸ್ಥಿತರಿದ್ದರು.

Share

Leave a Comment