ವಿಷ ಸೇವಿಸಿ ಕಾರ್ಮಿಕ ಸಾವು

ತಿಪಟೂರು, ಮೇ ೨೫- ವಿಷ ಸೇವಿಸಿ ಕಾರ್ಮಿಕನೋರ್ವ ಸಾವನ್ನಪ್ಪಿರುವ ಘಟನೆ ನಗರದಲ್ಲಿ ನಡೆದಿದೆ.
ಇಲ್ಲಿನ ಬಸ್ ನಿಲ್ದಾಣದ ಬಳಿ ಕಾರ್ಮಿಕನೋರ್ವ ವಿಷ ಸೇವಿಸುತ್ತಿರುವುದನ್ನು ಕಂಡ ಸಾರ್ವಜನಿಕರು ಪೊಲೀಸರಿಗೆ ಸುದ್ದಿ ಮುಟ್ಟಿಸಿದರು. ತಕ್ಷಣ ಸ್ಥಳಕ್ಕೆ ಧಾವಿಸಿದ ಪೊಲೀಸರು ವಿಷ ಸೇವಿಸಿದ್ದ ವ್ಯಕ್ತಿಯನ್ನು ಸರ್ಕಾರಿ ಆಸ್ಪತ್ರೆಗೆ ಕೊಂಡೊಯ್ದು ಚಿಕಿತ್ಸೆಗಾಗಿ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

ಮೃತ ವ್ಯಕ್ತಿ ಗುಬ್ಬಿ ತಾಲ್ಲೂಕು ಕಡಬ ಗ್ರಾಮದಲ್ಲಿ ಗಾರೆ ಕೆಲಸ ಮಾಡುತ್ತಿದ್ದರೆಂದು ತಿಳಿದು ಬಂದಿದೆ. ಆದರೆ ಈತನ ನಿಖರ ವಿಳಾಸ ತಿಳಿದು ಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಸಂಬಂಧ ತಿಪಟೂರು ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಜರುಗಿಸುತ್ತಿದ್ದಾರೆ.

Share

Leave a Comment