ವೃತ್ತ ನಿರೀಕ್ಷಕರಾಗಿ ರವಿನಾಯಕ್ ನೇಮಕ

ಹನೂರು: ಅ.21- ಪಟ್ಟಣದ ಪೊಲೀಸ್ ಠಾಣೆಯ ವೃತ್ತ ನಿರೀಕ್ಷಕರಾಗಿ ರವಿನಾಯಕ್ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ಹನೂರು ಪೊಲೀಸ್ ಠಾಣೆಯ ವೃತ್ತ ನಿರೀಕ್ಷಕರಾಗಿ ಕರ್ತವ್ಯನಿರ್ವಹಿಸುತ್ತಿದ್ದ ಮೋಹಿತ್ ಸಹದೇವ್ ಅವರನ್ನು ಸ್ಥಳ ನಿಯುಕ್ತಿಗೊಳಿಸದೆ ವರ್ಗಾವಣೆ ಮಾಡಲಾಗಿದ್ದು, ತೆರವಾಗಿರುವ ಸ್ಥಾನಕ್ಕೆ ಮಂಗಳೂರು ನಗರ ಕೋಣಾಜೆ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ರವಿನಾಯಕ್ ಅವರನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದಾರೆ.

Leave a Comment