ವೇಶ್ಯಾವಾಟಿಕೆ: ಇಬ್ಬರ ಬಂಧನ

ತುಮಕೂರು, ನ. ೯- ವೇಶ್ಯಾವಾಟಿಕೆ ನಡೆಸುತ್ತಿದ್ದ ಮನೆ ಮೇಲೆ ಪೊಲೀಸರು ದಾಳಿ ನಡೆಸಿ ಇಬ್ಬರನ್ನು ಬಂಧಿಸಿರುವ ಘಟನೆ ಇಲ್ಲಿನ ಜಯನಗರದಲ್ಲಿ ನಡೆದಿದೆ.
ರಾಧಾ ಹಾಗೂ ತೇಜಸ್ ಎಂಬುವರೇ ಬಂಧಿತರು. ಲೈಂಗಿಕ ಶೋಷಣೆಗೆ ಒಳಗಾಗಿದ್ದ ಇಬ್ಬರು ಮಹಿಳೆಯರನ್ನು ರಕ್ಷಿಸಿ ಮಹಿಳಾ ಸಾಂತ್ವನ ಕೇಂದ್ರಕ್ಕೆ ಕಳುಹಿಸಿಕೊಡಲಾಗಿದೆ.
ರಾಧಾ ಮತ್ತು ತೇಜಸ್ ಇಬ್ಬರು ಮಹಿಳೆಯರನ್ನು ಕರೆ ತಂದು ವೇಶ್ಯಾವಾಟಿಕೆ ನಡೆಸುತ್ತಿದ್ದರು ಎಂಬ ಮಾಹಿತಿ ಮೇರೆಗೆ ಪೊಲೀಸರು ದಾಳಿಸಿ ಇವರಿಬ್ಬರನ್ನು ಬಂಧಿಸಿದ್ದಾರೆ.
ಈ ಸಂಬಂಧ ಜಯನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಜರುಗಿಸುತ್ತಿದ್ದಾರೆ.

Leave a Comment