ವೈದ್ಯಕೀಯ ಕ್ಷೇತ್ರದಲ್ಲಿ ಅಮೂಲಾಗ್ರ ಬದಲಾವಣೆ; ಶ್ಲಾಘನೆ

ದಾವಣಗೆರೆ.ಅ.17; ಈ ಹಿಂದೆ ಮಕ್ಕಳ ವೈದ್ಯಕೀಯ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಸೌಲಭ್ಯಗಳು ಕಡಿಮೆ ಇತ್ತು. ಮಕ್ಕಳ ವೈದ್ಯಕೀಯ ಚಿಕಿತ್ಸೆ ಕುರಿತು ವಿದ್ಯಾಭ್ಯಾಸ ಮಾಡಬೇಕಾಗಿದ್ದರೆ ವಿದೇಶಕ್ಕೆ ಹೋಗಬೇಕಾಗಿತ್ತು. ಆದರೆ ಈಗ ಎಲ್ಲಾ ಸೌಲಭ್ಯಗಳು ಸ್ಥಳೀಯವಾಗಿಯೇ ಸಿಗುತ್ತಿದೆ. ಆದ್ದರಿಂದ ವೈದ್ಯಕೀಯ ವಿದ್ಯಾರ್ಥಿಗಳು ಇದರ ಸದುಪಯೋಗಪಡೆದುಕೊಂಡು ಉತ್ತಮ ವೈದ್ಯರಾಗಿ ಎಂದು ದಕ್ಷಿಣ ಭಾರತದ ಐಎಪಿ ಉಪಾಧ್ಯಕ್ಷರಾದ ಡಾ.ಶ್ರೀನಾಥ ಮುಗಳಿ ಹೇಳಿದರು.
ನಗರದ ಬಾಪೂಜಿ ಆಸ್ಪತ್ರೆಯಲ್ಲಿಂದು ಜೆಜೆಎಂ ಮೆಡಿಕಲ್ ಕಾಲೇಜು, ಎಸ್‍ಎಸ್ ಮೆಡಿಕಲ್ ಕಾಲೇಜು, ದಾವಣಗೆರೆ ಮಕ್ಕಳ ಜಿಲ್ಲಾ ಘಟಕ ಸಂಯುಕ್ತಾಶ್ರಯದಲ್ಲಿ ದಕ್ಷಿಣ ಭಾರತ ಹಾಗೂ ಕರ್ನಾಟಕ ಮಕ್ಕಳ ಸಂಸ್ಥೆಯ ವಾರ್ಷಿಕ ಸಮ್ಮೇಳನದ ಅಂಗವಾಗಿ ಹಮ್ಮಿಕೊಂಡಿದ್ದ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದ ಅವರು ವೈದ್ಯಕೀಯ ಕ್ಷೇತ್ರದಲ್ಲಿ ಈಗ ಹಲವಾರು ಬದಲಾವಣೆ ಕಾಣಬಹುದು. ಈ ಹಿಂದೆ ಮಕ್ಕಳ ಶಸ್ತ್ರಚಿಕಿತ್ಸೆ ಸೇರಿದಂತೆ ಸೌಲಭ್ಯಗಳಿಗಾಗಿ ವಿದೇಶಗಳಿಗೆ ಹೋಗಬೇಕಾಗುತ್ತಿತ್ತು. ಆದರೆ ಈಗ ಇಲ್ಲಿ ಮಕ್ಕಳ ಶಸ್ತ್ರ ಚಿಕಿತ್ಸೆಗೂ ಅತ್ಯಾಧುನಿಕ ತಂತ್ರಜ್ಞಾನವನ್ನು ಲಭ್ಯವಿದೆ. ಈ ಶಸ್ತ್ರಚಿಕಿತ್ಸೆ ಯಂತ್ರಗಳ ಬಗ್ಗೆ ಮಾಹಿತಿ ಪಡೆದುಕೊಳ್ಳಬೇಕಾದರೆ ವಿದೇಶಕ್ಕೆ ಹೋಗುವ ಅನಿವಾರ್ಯತೆ ಇತ್ತು. ಈಗ ಆ ರೀತಿಯ ಸಮಸ್ಯೆ ಇಲ್ಲ, ಸ್ಥಳೀಯವಾಗಿ ಎಲ್ಲಾ ರೀತಿಯ ಯಂತ್ರೋಪಕರಣಗಳು ಇದ್ದು, ಇವುಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಂಡರೆ ಮಕ್ಕಳಿಗೆ ಅತ್ಯುತ್ತಮ ಚಿಕಿತ್ಸೆ ನೀಡಬಹುದು.ವೈದ್ಯಕೀಯ ವಿದ್ಯಾರ್ಥಿಗಳಿಗೆ ಸೆಮಿನಾರ್ ಮಾಡುತ್ತಿರುವುದು ಉತ್ತಮ ಕೆಲಸವಾಗಿದೆ. ಇದರ ಸದುಪಯೋಗವನ್ನು ಎಲ್ಲರು ಪಡೆದುಕೊಳ್ಳಬೇಕು ಎಂದು ಹೇಳಿದರು.
ಸಮ್ಮೇಳನದ ಅಧ್ಯಕ್ಷರಾದ ಡಾ.ಎನ್.ಕೆ.ಕಾಳಪ್ಪನವರ್ ಮಾತನಾಡಿ, ಮಕ್ಕಳ ಆರೋಗ್ಯಕ್ಕೆ ಸಂಬಂಧಪಟ್ಟಂತೆ ಇಂದು 10 ಕಡೆಗಳಲ್ಲಿ ಏಕಕಾಲದಲ್ಲಿಯೇ ವಿವಿಧ ವಿಷಯಗಳ ಕುರಿತು ಕಾರ್ಯಾಗಾರವನ್ನು ಮಾಡಲಾಗುತ್ತಿದೆ. ಸುಮಾರು 400 ಕ್ಕೂ ಹೆಚ್ಚು ಶಿಬಿರಾರ್ಥಿಗಳು,80 ಕ್ಕೂ ಹೆಚ್ಚು ನುರಿತ ತಜ್ಞರು ಆಗಮಿಸಲಿದ್ದಾರೆ ಎಂದು ತಿಳಿಸಿದರು.
ಈ ವೇಳೆ ಎಸ್‍ಎಸ್ ವೈದ್ಯಕೀಯ ಮಹಾವಿದ್ಯಾಲಯದ ಪ್ರಾಚಾರ್ಯರಾದ ಡಾ.ಬಿ.ಎಸ್.ಪ್ರಸಾದ್, ರಾಷ್ಟ್ರೀಯ ಐಎಪಿ ಅಧ್ಯಕ್ಷರಾದ ಡಾ.ದಿಗಂತ್ ಶಾಸ್ತ್ರಿ, ಡಾ.ಸಂತೋಷ್ ಸೂನ್ಸ್, ಡಾ.ಶಾಂತರಾಜ್, ಡಾ.ಎಸ್.ಬಿ.ಮುರುಗೇಶ್, ಡಾ.ಮಧು ಎಸ್ ಪೂಜಾರಿ, ಡಾ.ಬಸವಂತಕುಮಾರ್, ಡಾ.ವರುಣ್ ಕುಸಗೂರು ಸೇರಿದಂತೆ ಮತ್ತಿತರರಿದ್ದರು.
ಬಾಕ್ಸ್
10ಟಿಛಿ =
ಮಕ್ಕಳಲ್ಲಿ ಕಾಣಿಸಿಕೊಳ್ಳುವ ಡೆಂಗ್ಯೂ, ಹೃದಯ ಸಂಬಂಧಿ ಕಾಯಿಲೆ, ರಕ್ತಹೀನತೆ, ಹೆಚ್1ಎನ್1, ಮೂರ್ಛೆ ರೋಗ, ಮೂತ್ರಪಿಂಡಕಾಯಿಲೆಗಳು, ಶ್ವಾಸಕೋಶ ಸಂಬಂಧಿಸಿದಂತೆ ಕಾಯಿಲೆಗಳ ಬಗ್ಗೆ ಚಿಕಿತ್ಸಾ ವಿಧಾನಗಳನ್ನು ಚರ್ಚೆ ಹಾಗೂ ಉಪನ್ಯಾಸದ ಮೂಲಕ ತಿಳಿಸಲಾಯಿತು.

Leave a Comment