ವೈದ್ಯಕೀಯ ತಪಾಸಣೆ ಬಳಿಕ ಆದಿತ್ಯರಾವ್‌ ಮಂಗಳೂರು ಪೊಲೀಸರ ವಶಕ್ಕೆ: ಚೇತನ್ ಸಿಂಗ್ ರಾಥೋರ್

ಬೆಂಗಳೂರು, ಜ 22 – ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್ ಇಟ್ಟಿದ್ದ ವ್ಯಕ್ತಿ ಬೆಳಗ್ಗೆ 8ರಿಂದ 9ರ ಸುಮಾರಿಗೆ ಪೊಲೀಸರಿಗೆ ಶರಣಾಗಿದ್ದಾನೆ ಎಂದು ಕೇಂದ್ರ ಡಿಸಿಪಿ ಚೇತನ್ ಸಿಂಗ್ ರಾಥೋರ್ ತಿಳಿಸಿದ್ದಾರೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆದಿತ್ಯ ರಾವ್ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ತಾನೇ ಇಟ್ಟಿರುವುದಾಗಿ ತಪ್ಪೊಪ್ಪಿಕೊಂಡು ಶರಣಾಗಿದ್ದಾನೆ. ಬೆಳಗ್ಗೆ 8.30ರ ಸುಮಾರಿಗೆ ಪೊಲೀಸರ ಎದುರು ಶರಣಾಗಿದ್ದಾನೆ ಎಂದರು.

ಸದ್ಯ ಮಂಗಳೂರು ಪೊಲೀಸರು ಬೆಂಗಳೂರು ನಗರದತ್ತ ಪ್ರಯಾಣ ಬೆಳೆಸಿದ್ದಾರೆ. ಆರೋಪಿಯನ್ನು ವೈದ್ಯಕೀಯ ತಪಾಸಣೆ ನಡೆಸಿ, ಕಾನೂನು ರೀತಿಯಲ್ಲಿ ಮಂಗಳೂರು ಪೊಲೀಸರಿಗೆ ಹಸ್ತಾಂತರಿಸಲಾಗುವುದು ಎಂದರು.

ಇಂದು ಮಧ್ನಾಹ್ನದ ವೇಳೆ ಆರೋಪಿ ಆದಿತ್ಯ ರಾವ್ ಅನ್ನು ತನಿಖಾಧಿಕಾರಿಗಳ ವಶಕ್ಕೆ ನೀಡಲಾಗುವುದು ಎಂದು ತಿಳಿಸಿದರು.

ಸದ್ಯ ಮಂಗಳೂರು ಉತ್ತರ ವಿಭಾಗದ ಎಸಿಪಿ ಬೆಳ್ಳಿಯಪ್ಪ ಅವರ ನೇತೃತ್ವದ ತಂಡ ಬೆಂಗಳೂರಿಗೆ ಪ್ರಯಾಣ ಬೆಳೆಸಿದ್ದು, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೆಂಗಳೂರು ಪೊಲೀಸರು ಮಂಗಳೂರು ಪೊಲೀಸರಿಗೆ ಆರೋಪಿಯನ್ನು ಹಸ್ತಾಂತರ ಮಾಡಲಿದ್ದಾರೆ ಎಂದು ತಿಳಿದು ಬಂದಿದೆ.

Leave a Comment