ವ್ಯಕ್ತಿ ಮೇಲೆ ಕರಡಿ ದಾಳಿ

ಮಧುಗಿರಿ, ಸೆ. ೭- ಮೇಕೆ ಮೇಯಿಸು ಹೋಗಿದ್ದ ವ್ಯಕ್ತಿ ಮೇಲೆ ಕರಡಿ ದಾಳಿ ನಡೆಸಿ ತೀವ್ರವಾಗಿ ಗಾಯಗೊಳಿಸಿರುವ ಘಟನೆ ತಾಲ್ಲೂಕಿನ ವಜ್ರದಹಳ್ಳಿ ಗ್ರಾಮದಲ್ಲಿ ನಡೆದಿದೆ.

ತಾಲ್ಲೂಕಿನ ವಜ್ರದಹಳ್ಳಿ ಗ್ರಾಮದ ಲಕ್ಷ್ಮಣ (28) ಎಂಬುವರೇ ಕರಡಿ ದಾಳಿಗೆ ಒಳಗಾಗಿ ಗಂಭೀರವಾಗಿ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಲಕ್ಷ್ಮಣ್ ಮೇಕೆಗಳನ್ನು ಮೇಯಿಸಿಕೊಂಡು ಮನೆಗೆ ಹಿಂದಿರುಗುತ್ತಿದ್ದಾಗ ಪೊದೆಯಲ್ಲಿ ಅಡಗಿ ಕುಳಿತಿದ್ದ ಕರಡಿ ದಿಢೀರನೆ ಮೇಲೆರಗಿ ತೀವ್ರವಾಗಿ ಗಾಯಗೊಳಿಸಿದೆ.

ಈ ಕರಡಿ ದಾಳಿಯಿಂದ ಗ್ರಾಮಸ್ಥರು ತೀವ್ರ ಆತಂಕಕ್ಕೊಳಗಾಗಿದ್ದು, ಕೂಡಲೇ ಅರಣ್ಯ ಇಲಾಖೆ ಅಧಿಕಾರಿಗಳು ಕರಡಿಯನ್ನು ಸೆರೆ ಹಿಡಿಯಬೇಕು ಎಂದು ಆಗ್ರಹಿಸಿದ್ದಾರೆ.

ಘಟನೆಯ ಸುದ್ದಿ ತಿಳಿದ ಕೂಡಲೇ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.

Leave a Comment