ಶಂಕಿತ ಉಗ್ರರ ದಾಳಿ: ಜಮ್ಮುವಿನಲ್ಲಿ ಕಟ್ಟೆಚ್ಚರ

ಜಮ್ಮು,ಸೆ.೧೨- ಶಂಕಿತ ಉಗ್ರರು ಭದ್ರತಾ ಪಡೆ ಮೇಲೆ ನಡೆಸಿದ ಗುಂಡಿನ ದಾಳಿಯಿಂದಾಗಿ ಜಮ್ಮುವಿನಲ್ಲಿ ಬುಧವಾರ ಬಿಗಿ ಭದ್ರತೆ ಒದಗಿಸಿದ್ದು, ಕಟ್ಟೆಚ್ಚರ ವಹಿಸಲಾಗಿದೆ.

ಜಮ್ಮು, ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲೇ ಉಗ್ರರು ದಾಳಿ ನಡೆಸಿದ ಹಿನ್ನೆಲೆ ಆ ಪ್ರದೇಶದ ಸುತ್ತಮುತ್ತ ಮತ್ತು ಜಮ್ಮುವಿನ ಸೂಕ್ಷ್ಮ ಹಾಗೂ ಅತೀ ಸೂಕ್ಷ್ಮ ಪ್ರದೇಶಗಳಲ್ಲೂ ಹೆಚ್ಚುವರಿ ನಿಗಾ ಇಡಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಕತ್ರಾ, ವೈಷ್ಣವೋ ದೇವಿ ಗುಹೆಯ ಬೇಸ್ ಕ್ಯಾಂಪ್ ಮತ್ತು ನಗರಕ್ಕೆ ಸಂಪರ್ಕ ಕಲ್ಪಿಸುವ ಎಲ್ಲಾ ರಸ್ತೆಗಳಲ್ಲೂ ಹೆಚ್ಚುವರಿ ಭದ್ರತೆ ಒದಗಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಎಲ್ಲಾ ಹೆದ್ದಾರಿಗಳು ಹಾಗೂ ಚೆಕ್‌ಪೋಸ್ಟ್‌ಗಳ ಬಳಿ ವಾಹನಗಳನನು ತಪಾಸಣೆ ನಡೆಸಲಾಗುತ್ತಿದೆ ಎಂದಿದ್ದಾರೆ.

Leave a Comment