ಶರತ್ ಬಚ್ಚೇಗೌಡರಿಗೆ ‘ಕುಕ್ಕರ್ ಚಿಹ್ನೆ’

ಹೊಸಕೋಟೆ : ಹೊಸಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣಾ ಅಖಾಡ ರಂಗೇರಿದ್ದು, ರಾಜಕೀಯ ಪ್ರತಿಷ್ಟೆಯಾಗಿ ಪರಿಣಮಿಸಿದೆ.
ಬಿಜೆಪಿಯಿಂದ ಅನರ್ಹ ಶಾಸಕ ಎಂಟಿಬಿ ನಾಗರಾಜ್ ಅಖಾಡಕ್ಕಿಳಿದಿದ್ದು, ಬಿಜೆಪಿಯಿಂದ ಬಂಡಾಯವೆದ್ದು ಶರತ್ ಬಚ್ಚೇಗೌಡ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದು, ತೀವ್ರ ಪೈಪೋಟಿ ಏರ್ಪಟ್ಟಿದೆ. ಈ ನಡುವೆ ಇಂದು ಚುನಾವಣಾಧಿಕಾರಿಗಳು ಪಕ್ಷೇತರ ಅಭ್ಯರ್ಥಿ ಶರತ್ ಬಚ್ಚೇಗೌಡ ಅವರಿಗೆ ಕುಕ್ಕರ್ ಚಿಹ್ನೆ ನೀಡಿದ್ದಾರೆ.

ಹೊಸಕೋಟೆ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಶರತ್ ಬಚ್ಚೇಗೌಡ ಅವರಿಗೆ ಕುಕ್ಕರ್ ಚಿಹ್ನೆ ಹಾಗೂ ಕ್ರಮ ಸಂಖ್ಯೆ 15 ನೀಡಿದ್ದಾರೆ. ಇನ್ನು ಹೊಸಕೋಟೆ ಕ್ಷೇತ್ರದಲ್ಲಿ ಅಂತಿಮವಾಗಿ 17 ಮಂದಿ ಅಭ್ಯರ್ಥಿಗಳು ಕಣದಲ್ಲಿದ್ದು, ತೀವ್ರ ಹಣಾಹಣಿ ಏರ್ಪಟ್ಟಿದೆ…

Leave a Comment