ಶಾಸಕ ರಾಮದಾಸ್ ಕಾರ್ ಅಪಘಾತ

ಮಂಗಳೂರು ಆ.೨೩- ಮೈಸೂರು ಕೃಷ್ಣ ರಾಜ ಕ್ಷೇತ್ರದ ಶಾಸಕ ಎಸ್.ಎ.ರಾಮದಾಸ್ ಸಂಚರಿಸುತ್ತಿದ್ದ ಕಾರು ಅಪಘಾತಕ್ಕೀಡಾದ ಘಟನೆ ಸುಳ್ಯದ ಜಾಲ್ಸೂರಿನಲ್ಲಿ ಇಂದು ಬೆಳಗ್ಗೆ ೭ ಗಂಟೆ ಸುಮಾರಿಗೆ ನಡೆದಿರುವುದು ವರದಿಯಾಗಿದೆ.
ಘಟನೆಯಲ್ಲಿ ಶಾಸಕ ರಾಮದಾಸ್ ಹಾಗೂ ಕಾರು ಚಾಲಕ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಮೈಸೂರಿನಿಂದ ಸುಳ್ಯ ಮಾರ್ಗವಾಗಿ ಮಂಗಳೂರು ಬರುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಪಕ್ಕದ ಮೋರಿಗೆ ಢಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ. ವಿಷಯ ತಿಳಿದು ಕೂಡಲೇ ಸ್ಥಳಕ್ಕಾಗಮಿಸಿದ ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಅವರ ಸಹೋದರನ ಪುತ್ರ ಗಾಯಾಳುಗಳನ್ನು ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿದರು.

Leave a Comment