ಶಾಸಕ ಸ್ಥಾನಕ್ಕೆ ಜಾಧವ್ ರಾಜೀನಾಮೆ?

ಬೆಂಗಳೂರು, ಫೆ. ೧೨- ಆಪರೇಷನ್ ಕಮಲ ಪಾಸಾಗಲಿ, ಫೇಲಾಗಲಿ, ಚಿಂಚೋಳಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಡಾ. ಉಮೇಶ್ ಜಾಧವ್ ಕಾಂಗ್ರೆಸ್ ತ್ಯಜಿಸುವುದು ಪಕ್ಕಾ ಆಗಿದೆ.

ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ಸಂಬಂಧ ಆಪ್ತರು ಹಾಗೂ ಅಭಿಮಾನಿಗಳೊಂದಿಗೆ ಚರ್ಚೆ ನಡೆಸಿದ್ದಾರೆ. ಇಂದು ಇಲ್ಲವೆ, ನಾಳೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ಸಂಬಂಧ ಸುದೀರ್ಘ ಚರ್ಚೆ ನಡೆಸಿದ್ದಾರೆ.

ಕಾಂಗ್ರೆಸ್‌ನಿಂದ ಪಕ್ಷಾಂತರ ನಿಷೇಧ ಕಾಯ್ದೆಯ‌ಡಿ ಶಾಸಕ ಸ್ಥಾನದಿಂದ ಅನರ್ಹಗೊಳಿಸುವಂತೆ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ, ಸ್ಪೀಕರ್ ರಮೇಶ್ ಕುಮಾರ್ ಅವರಿಗೆ ದೂರು ನೀಡಿರುವ ಹಿನ್ನೆಲೆಯಲ್ಲಿ ಎದುರಾಗಬಹುದಾದ ಕಾನೂನು ಹೋರಾಟದ ಸಾಧಕ – ಬಾಧಕಗಳ ಬಗ್ಗೆಯೂ ಚರ್ಚೆ ನಡೆಸಿದ್ದಾರೆ.

ಶಾಸಕ ಉಮೇಶ್ ಜಾಧವ್ ರಾಜೀನಾಮೆ ನೀಡುತ್ತಿದ್ದಂತೆ, ಮುಂಬೈನಲ್ಲಿರುವ ಅತೃಪ್ತರು, ಜಾಧವ್ ಅವರ ಹಾದಿ ಹಿಡಿಯುವ ಸಾಧ್ಯತೆ ಇದೆ.
ಕಲಬುರಗಿಯಿಂದ ಸ್ಪರ್ಧೆ

ಕಾಂಗ್ರೆಸ್ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಬಿಜೆಪಿಗೆ ಸೇರ್ಪಡೆಯಾಗಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಲಬುರಗಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಸಾಧ್ಯತೆಗಳು ದಟ್ಟವಾಗಿವೆ.

Leave a Comment