ಶಿಕ್ಷಕರಿಂದ ಉತ್ತಮ ಸಮಾಜ ನಿರ್ಮಾಣ

ರಾಯಚೂರು.ಸೆ.08- ಶಿಕ್ಷಕರಿಂದ ಉತ್ತಮ ಸಮಾಜ ನಿರ್ಮಾಣವಾಗಲು ಸಾಧ್ಯವೆಂದು ಟಾಗೋರ್ ಸ್ಮಾರಕ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಆರ್.ಕೆ. ಅಮರೇಶ ಹೇಳಿದರು.
ನಗರದ ಟಾಗೋರ್ ಸ್ಮಾರಕ ಶಿಕ್ಷಣ ಸಂಸ್ಥೆಯ ಟಾಗೋರ್ ಸ್ಮಾರಕ ಪದವಿಪೂರ್ವ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ ಮತ್ತು ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಸ್ವಾಗತ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಶಿಕ್ಷಕರು ವಿದ್ಯಾರ್ಥಿಗಳಿಗೆ ಮಾದರಿಯಾಗಿ ತಮ್ಮ ವೃತ್ತಿಯನ್ನು ಪ್ರೀತಿಯಿಂದ ಗೌರವಿಸಬೇಕೆಂದು ತಿಳಿಸಿದರು. ನಿವೃತ್ತಿ ಶಿಕ್ಷಕ ರಾಮಸ್ವಾಮಿ ನೂಲಿ ಮಾತನಾಡಿ, ವಿದ್ಯಾರ್ಥಿಗಳು, ಶಿಕ್ಷಣ ಜೊತೆಗೆ ಶಿಕ್ಷಕರು ಹಾಗೂ ಗುರು ಹಿರಿಯರನ್ನು ಗೌರವಿಸಬೇಕೆಂದು ತಿಳಿಸಿದರು.
ಸಂಸ್ಥೆ ಕಾರ್ಯದರ್ಶಿಗಳಾದ ದರೂರು ಬಸವರಾಜ ಪಾಟೀಲ್, ವೀರನಗೌಡ, ಎಂ.ವಿ.ಪೊಲೀಸ್ ಪಾಟೀಲ್ ಉಪಸ್ಥಿತರಿದ್ದರು.

Leave a Comment