ಶಿಷ್ಯವೇತನಕ್ಕಾಗಿ ವೈದ್ಯಕೀಯ ವಿದ್ಯಾರ್ಥಿಗಳ ಪ್ರತಿಭಟನೆ

ದಾವಣಗೆರೆ.ಅ.12; ಶಿಷ್ಯ ವೇತನ ತಡೆಹಿಡಿದಿರುವ ರಾಜ್ಯ ಸರ್ಕಾರ ಕ್ರಮ ಖಂಡಿಸಿ ದಾವಣಗೆರೆ ಯಲ್ಲಿಂದು ಜೆಜೆಎಂ ವೈದ್ಯಕೀಯ ಕಾಲೇಜಿನ ಗೃಹವೈದ್ಯರು ಹಾಗೂ ಸ್ನಾತಕೋತ್ತರ ವೈದ್ಯ ವಿದ್ಯಾರ್ಥಿಗಳು ಜೂನಿಯರ್ ಡಾಕ್ಟರ್ಸ್ ಅಸೋಸಿಯೇಷನ್ ನ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು ನಗರದ ಚಿಗಟೇರಿ ಜಿಲ್ಲಾ ಆಸ್ಪತ್ರೆಯಿಂದ ರ್ಯಾಲಿ ಮೂಲಕ ಜಿಲ್ಲಾಧಿಕಾರಿ ಕಛೇರಿಗೆ ತೆರಳಿ ಮುಖ್ಯಮಂತ್ರಿಗಳಿಗೆ ಮನವಿ ಅರ್ಪಿಸಿದರು. ರಾಜ್ಯ ಸರ್ಕಾರ ಕಳೆದ 7 ತಿಂಗಳಿನಿಂದ ವೈದ್ಯಕೀಯ ವಿದ್ಯಾರ್ಥಿಗಳ ಶಿಷ್ಯವೇತನವನ್ನು ತಡೆ ಹಿಡಿದಿದೆ ಇದರಿಂದ ವಿದ್ಯಾರ್ಥಿಗಳಿಗೆ ಅನ್ಯಾಯವಾಗಿದೆ. ಆದ್ದರಿಂದ ರಾಜ್ಯ ಸರ್ಕಾರ ಇತ್ತ ಗಮನಹರಿಸಿ ವೈದ್ಯಕೀಯ ವಿದ್ಯಾರ್ಥಿಗಳಿಗೆ ಶಿಷ್ಯವೇತನ ನೀಡಲು ಮುಂದಾಗಬೇಕು. ಕೂಡಲೇ ಕ್ರಮವಹಿಸಿ ನೆರವು ನೀಡಬೇಕು ಎಂದು ಒತ್ತಾಯಿಸಿದರು.ಪ್ರತಿಭಟನೆಯಲ್ಲಿ ಜೂನಿಯರ್ ಡಾಕ್ಟರ್ಸ್ ಅಸೋಸಿಯೇಷನ್ ನ ಸ್ವರೂಪ್ ಮಲ್ಲೇಶ್ ಡಾ. ಸೈಯದ್ ಅಬರಾರ್ ಬಾಷಾ,ಡಾ.ಪ್ರಿಯಾಂಕ ಡಾ. ಅನುಶ್ರೀ ಸಿ ಎಂ, ಡಾ. ಸಮೀಕ್ಷಾ, ಡಾ. ಸಚ್ಚಿನ್, ಡಾ. ಅಭಿಜಿತ್ ಡಾ. ರಕ್ಷಿತ್ ಮತ್ತಿತರರಿದ್ದರು.

Leave a Comment