ಶೀಘ್ರವೇ ರಾಹುಲ್ ಭೇಟಿ: ಚೆಲುವರಾಯಸ್ವಾಮಿ

ಮಂಡ್ಯ, ಆ. 13- ಜೆಡಿಎಸ್ ಪಕ್ಷದ ಬಂಡಾಯ ಶಾಸಕರು ಸದ್ಯದಲ್ಲೇ ಕಾಂಗ್ರೆಸ್‍ನ ವರಿಷ್ಠ ರಾಹುಲ್‍ಗಾಂಧಿ ಅವರನ್ನು ಭೇಟಿ ಮಾಡಲಿದ್ದೇವೆ ಎಂದು ಜೆಡಿಎಸ್ ಬಂಡಾಯ ಶಾಸಕ ಎನ್. ಚೆಲುವರಾಯಸ್ವಾಮಿ ತಿಳಿಸಿದರು.
ಜಿಲ್ಲೆಯ ಮದ್ದೂರು ತಾಲೂಕಿನ ಕೌಡ್ಲೆ ಗ್ರಾಮದಲ್ಲಿ ಸುದ್ದಿಗಾರರ ಜೊತೆ ಮಾತನಾಡಿ, ನಾವು ಏಳು ಜನ ಬಂಡಾಯ ಶಾಸಕರ ಜೊತೆ ವಿಧಾನ ಪರಿಷತ್ತಿನ ಮಾಜಿ ಸದಸ್ಯರೊಬ್ಬರು ಕಾಂಗ್ರೆಸ್ ಪಕ್ಷ ಸೇರುವ ವಿಚಾರವನ್ನು ಖಚಿತಪಡಿಸಿದರು.
ವಿಧಾನ ಪರಿಷತ್ತಿನ ಮಾಜಿ ಸದಸ್ಯರಾದ ರಾಮಕೃಷ್ಣ ಅವರು ಸೇರಿದಂತೆ ಬಂಡಾಯ ಶಾಸಕರು ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ, ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಪರಮೇಶ್ವರ್, ಕಾಂಗ್ರೆಸ್ ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ, ಇಂಧನ ಸಚಿವ ಡಿ.ಕೆ.ಶಿವಕುಮಾರ್ ಅವರೊಡನೆ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿ ಪಕ್ಷಕ್ಕೆ ಸೇರುವ ಬಗ್ಗೆ ಮಾತುಕತೆ ನಡೆಸಲಾಗುವುದು ಎಂದರು.
ರಾಹುಲ್ ಗಾಂಧಿ ಅವರನ್ನು ನಾವು ಬಹುಶಃ ಆ.17 ರಂದು ಭೇಟಿ ಮಾಡುವ ಸಂಭವವಿದೆ. ಈ ಬಗ್ಗೆ ಇಂದು ಖಚಿತವಾಗಿ ಮಾಹಿತಿ ತಿಳಿದುಬರಲಿದೆ ಎಂದು ತಿಳಿಸಿದರು.

Leave a Comment