ಶುಕ್ರವಾರದಿಂದ ಮುಂಗಾರು ಅಧಿವೇಶನ

ಬೆಂಗಳೂರು, ಜುಲೈ 11 : ಕರ್ನಾಟಕದ ರಾಜಕೀಯ ಹೈಡ್ರಾಮಕ್ಕೆ ಇನ್ನೂ ತೆರೆ ಬಿದ್ದಿಲ್ಲ. ಕರ್ನಾಟಕ ವಿಧಾನಸಭೆಯ ಮುಂಗಾರು ಅಧಿವೇಶನಕ್ಕೆ ಶುಕ್ರವಾರ ಚಾಲನೆ ಸಿಗಲಿದೆ. ಮೊದಲ ದಿನದ ಅಧಿವೇಶನ ಕುತೂಹಲಕ್ಕೆ ಕಾರಣವಾಗಿದೆ.

16 ಶಾಸಕರ ರಾಜೀನಾಮೆ ಬಳಿಕ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ನೇತೃತ್ವದ ಕರ್ನಾಟಕ ಸರ್ಕಾರ ಬಹುಮತ ಕಳೆದುಕೊಂಡಿದೆ. ಮುಂಗಾರು ಅಧಿವೇಶನದ ಮೊದಲ ದಿನವಾದ ಶುಕ್ರವಾರ ವಿಶ್ವಾಸ ಮತಯಾಚನೆ ಮಾಡಲಾಗುತ್ತದೆಯೇ? ಎಂದು ಕಾದು ನೋಡಬೇಕಿದೆ.

ಜುಲೈ 12 ರಿಂದ 21ರ ತನಕ ಮುಂಗಾರು ಅಧಿವೇಶನ ನಡೆಯಲಿದೆ. ಅಧಿವೇಶನದ ಹಿನ್ನಲೆಯಲ್ಲಿ ವಿಧಾನಸೌಧದ ಸುತ್ತಮುತ್ತ ಸೆಕ್ಷನ್ 144 ಅನ್ವಯ ನಿಷೇಧಾಜ್ಞೆಯನ್ನು ಹಾಕಲಾಗಿದೆ. ಬುಧವಾರದ ಗಲಾಟೆ ಬಳಿಕ ವಿಧಾನಸೌಧದ ಭದ್ರತೆಯನ್ನು ಹೆಚ್ಚಿಸಲಾಗಿದೆ.

ಸರ್ಕಾರಕ್ಕೆ ಬಹುಮತವಿಲ್ಲ ಎಂದು ಪ್ರತಿಪಕ್ಷ ಬಿಜೆಪಿ ಆರೋಪ ಮಾಡುತ್ತಿದೆ. ಶುಕ್ರವಾರದ ಕಲಾಪದ ವೇಳೆ ಬಹುಮತ ಸಾಬೀತು ಮಾಡುವಂತೆ ಸರ್ಕಾರವನ್ನು ಒತ್ತಾಯಿಸುವ ನಿರೀಕ್ಷೆ ಇದೆ. ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಅವರ ನಡೆ ಏನು? ಎಂಬುದು ನಿಗೂಢವಾಗಿದೆ….

Leave a Comment