ಶುಕ್ರವಾರದ ಪ್ರಾರ್ಥನೆಯ ಸಂದರ್ಭ ಮಸೀದಿಯೊಳಗೆ ಸ್ಫೋಟ: 20 ಮಂದಿ ಮೃತ್ಯು

ಹೊಸದಿಲ್ಲಿ,ಅ.18: ಶುಕ್ರವಾರದ ಪ್ರಾರ್ಥನೆಯ ಸಂದರ್ಭ ಮಸೀದಿಯೊಳಗೆ ಸಂಭವಿಸಿದ ಸ್ಫೋಟದಲ್ಲಿ 20 ಮಂದಿ ಮೃತಪಟ್ಟು ಹಲವರು ಗಾಯಗೊಂಡಿರುವ ಘಟನೆ ಅಫ್ಘಾನಿಸ್ತಾನದಲ್ಲಿ ನಡೆದಿದೆ.
ನಂಗರ್ಹಾರ್ ನ ಹಸ್ಕಾ ಮಿನಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಘಟನೆಯಲ್ಲಿ 40ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎನ್ನಲಾಗಿದೆ. ಈ ಘಟನೆಯ ಹೊಣೆಯನ್ನು ಯಾವ ಉಗ್ರ ಸಂಘಟನೆಯೂ ಹೊತ್ತುಕೊಂಡಿಲ್ಲ.

Leave a Comment